Chikkamagaluru
lekhaka-Veeresha H G
ಚಿಕ್ಕಮಗಳೂರು, ಜೂನ್ 21: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮರ್ಯಾದೆ ಇಲ್ಲದ ಬೇಜವಾಬ್ದಾರಿ ಮುಖ್ಯಮಂತ್ರಿ. ಚುನಾವಣೆಗೂ ಮುನ್ನ ಗ್ಯಾರಂಟಿಗಳನ್ನು ಘೋಷಿಸುವಾಗ ನಿಮ್ಮ ತಲೆಯಲ್ಲಿ ಏನಿತ್ತು. ಮೆದುಳು ಇರಲಿಲ್ಲವಾ. ಸಗಣಿ ತುಂಬಿತ್ತಾ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಚಿಕ್ಕಮಗಳೂರು ನಗರದಲ್ಲಿ ಮಾತನಾಡಿದ ಅವರು, ಮೋದಿ ಅಕ್ಕಿ ಸೇರಿ ನೀವು 10 ಕೆ.ಜಿ. ಅಕ್ಕಿ ಕೊಡುವುದಿಲ್ಲ. ಕೇಂದ್ರ ಸರ್ಕಾರದ 5 ಕೆ.ಜಿ. ಅಕ್ಕಿ ಜೊತೆ ನೀವು ಘೋಷಿಸಿರುವಂತೆ 10 ಕೆ.ಜಿ.ಅಕ್ಕಿ ಕೊಡಿ. ಅಂದರೆ, ಒಬ್ಬರಿಗೆ ತಲಾ 15 ಕೆ.ಜಿ.ಅಕ್ಕಿ ಕೊಡಬೇಕು. ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಿ. ಒಂದೇ ತಿಂಗಳಿಗೆ ರಾಜ್ಯದಲ್ಲಿ ಅರಾಜಕತೆ ತುಂಬಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ಸಿಗರಿಗೆ ಮಾನ -ಮರ್ಯಾದೆ ಇಲ್ಲ. ವೋಟು ಹಾಕಿಸಿಕೊಂಡು ಜನರಿಗೆ ಮೋಸ ಮಾಡಿದ್ದೀರಾ. ಸಿದ್ದರಾಮಯ್ಯನವರೇ ನಿಮ್ಮ ಬೇಜವಾಬ್ದಾರಿ ಹೇಳಿಕೆಗಳನ್ನು ವಾಪಸ್ಸು ತೆಗೆದುಕೊಳ್ಳಿ ಎಂದು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ ಒಂದು ಬೇಜವಾಬ್ದಾರಿಯ ಸರ್ಕಾರ. ಚುನಾವಣೆಯನ್ನು ಗೆಲ್ಲುವುದಕ್ಕೆ ಇಲ್ಲ-ಸಲ್ಲದ ಭರವಸೆ-ಆಸೆ ತೋರಿಸಿದ್ದರು ಎಂದು ಆರೋಪಿಸಿದ್ದರು.
ಮಹಿಳೆಯರ ಬಸ್ಸಿಗೆ ಪಾಸ್ ಕೇಳುತ್ತಿದ್ದಾರೆ, ಸರ್ಟಿಫಿಕೇಟ್ ಕೇಳ್ತಿದ್ದಾರೆ. ನಾನು ಮಹಿಳೆ ಅನ್ನೋದಕ್ಕೆ ನನಗೆ ಸರ್ಟಿಫಿಕೇಟ್ ಬೇಕಿಲ್ಲ ಎಂದು ಸರ್ಟಿಫಿಕೇಟ್ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ಅಕ್ಕಿ ಕೊಡೋದಕ್ಕೆ ಕೇಂದ್ರ ಸರ್ಕಾರ ಕೊಡುತ್ತಿಲ್ಲ ಎನ್ನುತ್ತಿದ್ದಾರೆ. ಈಗ ಯಾಕೆ ನೀವು ಮೋದಿ ಕಡೆ ಬೆರಳು ತೋರಿಸುತ್ತೀರಾ. ಯಾವುದೇ ಮುಂದಾಲೋಚನೆ ಇಲ್ಲದೆ ಘೋಷಿಸಿ ಇವತ್ತು ಮೋದಿ ಕಡೆ ತೋರಿಸುತ್ತಿದ್ದೀರಾ ಎಂದು ಪ್ರಶ್ನಿಸಿದರು.
ನಾವು ಅಂದೇ ಕೇಳಿದ್ದೇವು ಇವಕ್ಕೆಲ್ಲಾ ಹಣ ಎಲ್ಲಿಂದ ತರುತ್ತೀರಾ ಎಂದು. ಅಂದು ಸುಮ್ಮನಿದ್ದು ಇಂದು ಅಕ್ಕಿ, ದುಡ್ಡು, ವಿದ್ಯುತ್ ಎಲ್ಲದಕ್ಕೂ ಮೋದಿ ಕಡೆ ತೋರಿಸುತ್ತಿದ್ದೀರಾ? ಎಲ್ಲದಕ್ಕೂ ಮೋದಿ ತೋರಿಸುವುದಾದರೆ, ಅಂದು ನೀವು ಗ್ಯಾರಂಟಿ ಕಾರ್ಡ್ ಏಕೆ ಹಂಚಿದ್ದೀರಿ, ಯಾರಿಗೆ ಮೋಸ ಮಾಡಿ, ಯಾರ ಮೂಗಿಗೆ ತುಪ್ಪ ಸವರಲು ಹಂಚಿದಿರಿ ಎಂದು ಕಿಡಿಕಾರಿದ್ದಾರೆ.
ಬಫರ್ ಸ್ಟಾಕ್ ಇರೋದು ನೆರೆ, ಬರ, ಯುದ್ಧದ ಸಂದರ್ಭದಲ್ಲಿ ಜನರ ಬಳಕೆಗೆ. ನಿಮಗೆ ಅಕ್ಕಿ ಬೇಕಾದರೆ ಬೇರೆ ರಾಜ್ಯದಲ್ಲಿ ಖರೀದಿಸಿ, ನಮ್ಮ ರಾಜ್ಯದ ರೈತರೇ ಅಕ್ಕಿಯನ್ನು ಮಾರುತ್ತಾರೆ. ಅವರ ಬಳಿ ಖರೀದಿಸಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಲಹೆ ನೀಡಿದ್ದಾರೆ.
English summary
Siddaramaiah irresponsible Chief Minister Union Minister Shobha Karandlaje Lashes out at Congress and CM Siddaramaiah. Know more.
Story first published: Wednesday, June 21, 2023, 15:42 [IST]