Mysuru
oi-Mamatha M

ಮೈಸೂರು, ಜುಲೈ. 13: ಚುನಾವಣೆ ಸೋತ ಬಳಿಕ ತನಗೂ ಕ್ಷೇತ್ರಕ್ಕೂ ಸಂಬಂಧವಿಲ್ಲದಂತೆ ನಟಿಸುವ ರಾಜಕೀಯ ನಾಯಕರ ಮಧ್ಯೆ ಹುಣಸೂರಿನ ಮಾಜಿ ಶಾಸಕ ಎಚ್ ಪಿ ಮಂಜುನಾಥ್ ವಿಭಿನ್ನವಾಗಿ ನಿಂತಿದ್ದಾರೆ. ಹುಣಸೂರು ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನಯ ತಾತ್ಕಾಲಿಕ ತಡೆಯನ್ನು ತೆರವು ಮಾಡಬೇಕು ಎಂದು ಜಲಸಂಪನ್ಮೂಲ ಇಲಾಖೆ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಹುಣಸೂರು ತಾಲ್ಲೂಕಿನ ಮರದೂರು ಗ್ರಾಮದ ಬಳಿ ಲಕ್ಷ್ಮಣ ತೀರ್ಥ ನದಿಯಿಂದ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿ ವ್ಯಾಪ್ತಿಯ 47 ಕೆರೆ ಕಟ್ಟೆಗಳ ಕುಡಿಯುವ ನೀರಿಗಾಗಿ ನೀರು ತುಂಬಿಸುವ ಯೋಜನೆಗೆ ನೀಡಿರುವ ತಾತ್ಕಾಲಿಕ ತಡೆಯನ್ನು ತೆರವು ಮಾಡಿ ಯೋಜನೆ ಪ್ರಾರಂಭಿಸಲು ಸಂಬಂದಪಟ್ಟ ಇಲಾಖೆ ಅಧಿಕಾರಿಗಳಿಗೆ ಆದೇಶಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಇಲಾಖೆ ಸಚಿವ ಡಿ. ಕೆ ಶಿವಕುಮಾರ್ ಅವರಿಗೆ ವಿಧಾನಸೌಧದಲ್ಲಿ ಮಾಜಿ ಶಾಸಕ ಎಚ್ ಪಿ ಮಂಜುನಾಥ್ ಮನವಿ ಸಲ್ಲಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಲ್ಪ ಮತಗಳಿಂದ ಸೋತಿದ್ದರೂ, ತಾಲೂಕಿನ ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸದೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಂಬಂದಪಟ್ಟ ಸಚಿವರ ಬೆನ್ನು ಬಿದ್ದು ಅರ್ಧ ಮುಗಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅನುದಾನ ಬಿಡುಗಡೆಗೆ ಮನವಿ ಸಲ್ಲಿಸುತ್ತಿದ್ದಾರೆ. ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿ ವ್ಯಾಪ್ತಿಯ 47 ಕೆರೆಗಳಿಗೆ ಲಕ್ಷ್ಮಣತೀರ್ಥ ನದಿಯಿಂದ ಏತ ನೀರಾವರಿ ಮೂಲಕ ನೀರು ತುಂಬಿಸುವ ಯೋಜನೆಗೆ ಈ ಹಿಂದೆ ಟೆಂಡರ್ ಪ್ರಕ್ರಿಯೆ ನಡೆದಿತ್ತು. ಆದರೆ, ಕಾಮಗಾರಿಗಳಿಗೆ ತಡೆಹಿಡಿಯುವಂತೆ ಸರ್ಕಾರ ಆದೇಶಿಸಿದೆ.
ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಹುಣಸೂರು ತಾಲ್ಲೂಕಿನ ಲಕ್ಷ್ಮಣ ತೀರ್ಥ ನದಿಯಿಂದ ಮರದೂರು ಬಳಿ ಹುಣಸೂರು ತಾಲ್ಲೂಕಿನ 47 ಕೆರೆಗಳಿಗೆ 85 ಕೋಟಿ ರೂ ಯೋಜನಾ ವೆಚ್ಚ ದಲ್ಲಿ ಏತನೀರಾವರಿ ಮುಖಾಂತರ ನೀರು ತುಂಬಿಸುವ ಯೋಜನೆಗೆ ಈ ಹಿಂದೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕಾಮಗಾರಿ ಟೆಂಡರ್ ಪ್ರಕ್ರಿಯೆ ಹಂತದಲ್ಲಿರುತ್ತದೆ.

ಹೊಸ ಸರ್ಕಾರ ಬಮದ ನಂತರ ಎಲ್ಲಾ ಇಲಾಖೆಗಳಲ್ಲಿ ಪ್ರಾರಂಭವಾಗದಿರುವ ಕಾಮಗಾರಿಗಳಿಗೆ ತಡೆಹಿಡಿಯುವಂತೆ ಆದೇಶಿಸಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹುಣಸೂರು ತಾಲೂಕಿನ ಮರದೂರು ಏತ ನೀರಾವರಿ ಯೋಜನೆಯ ಅನುಷ್ಟಾನ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಈ ಯೋಜನೆಯಿಂದ ಹುಣಸೂರು ತಾಲ್ಲೂಕಿನ 30 ಹಳ್ಳಿಗಳ ಮಳೆ ಆಶ್ರಿತ ಪ್ರದೇಶದ ಅರ್ಧದಷ್ಟು ಭಾಗಕ್ಕೆ ಪೆಟ್ಟು ಬೀಳಲಿದೆ.
ಜನ ಜಾನುವಾರುಗಳಿಗೆ ಕುಡಿಯಲು ನೀರಿಗಾಗಿ ಮತ್ತು ಅಂತರ್ಜಲ ಮಟ್ಟದ ಸುಧಾರಣೆಗೆ ಅನುಕೂಲವಾಗಲಿದ್ದು ಯೋಜನೆಯ ಪ್ರಸ್ತಾವನೆ ಹಾಗೂ ಅನುಮೋದನೆಗಾಗಿ ಕಳೆದ ಹತ್ತು ವರ್ಷಗಳಿಂದ ಮಾಜಿ ಶಾಸಕರು ಪ್ರಯತ್ನಿಸಿರುವುದಾಗಿ ತಿಳಿಸಿದ್ದಾರೆ. ಪ್ರಸ್ತುತ ಸರ್ಕಾರದಲ್ಲಿ ಅನುಮೋದನೆ ದೊರೆತಿರುವುದು ಸದರಿ ಭಾಗದ ರೈತರಲ್ಲಿ ವಿಶ್ವಾಸವನ್ನು ಹೆಚ್ಚಿಸಿದ್ದು, ಬೆಳೆ ಬೆಳೆಯುಲು ಅದರ ಫಲವನ್ನು ಅನುಭವಿಸಲು ರೈತರು ಕಾಯುತ್ತಿದ್ದು ಕಾರ್ಯಕ್ರಮವನ್ನು ಶೀರ್ಘ ಅನುಷ್ಟಾನದ ಅವಶ್ಯಕತೆ ಇದೆ.
ತಿ.ನರಸೀಪುರ: ಹತ್ಯೆಯಾದ ಯುವ ಬ್ರಿಗೇಡ್ ಕಾರ್ಯಕರ್ತನ ಪತ್ನಿಗೆ 4.12 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ H.C.ಮಹದೇವಪ್ಪ
ಹೀಗಾಗಿ ಸರ್ಕಾರ ನೀಡಿರುವ ತಾತ್ಕಾಲಿಕ ತಡೆಯನ್ನು ಹಿಂಪಡೆದು ಯೋಜನೆಯನ್ನು ಅನುಷ್ಟಾನ ಳಿಸಲು ಸಂಬಂಧಿಸಿದ ಇಲಾಖೆಗೆ ಆದೇಶಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಇಲಾಖೆ ಸಚಿವ ಡಿಕೆ ಶಿವಕುಮಾರ್ ಅರವರಿಗೆ ಹುಣಸೂರಿನ ಮಾಜಿ ಶಾಸಕ ಎಚ್ ಪಿ. ಮಂಜುನಾಥ್ ಮನವಿ ಮಾಡಿದ್ದಾರೆ.
English summary
Former Hunsur MLA HP Manjunath met DCM DK Shivakumar in vidhana soudha. here is his demands about drinking water. know more.
Story first published: Thursday, July 13, 2023, 23:28 [IST]