Hassan
lekhaka-Veeresha H G
ಹಾಸನ, ಜೂನ್, 21: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರದಿಂದ (ಜೂನ್ 20) ಮುಂಗಾರು ಮಳೆ ಶುರು ಆಗಿದೆ. ಹಾಗೆಯೇ ಹಾಸನ ಜಿಲ್ಲೆಯ ಹಲವೆಡೆ ನಿನ್ನೆ ಸುರಿದ ಅಬ್ಬರದ ಮಳೆಯಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಜಿಲ್ಲೆಯ ಕೆಲವೆಡೆ ಮನೆಗಳು ಜಲಾವೃತವಾದರೆ, ಮತ್ತೊಂದೆಡೆ ಕೃಷಿ ಬೆಳೆಗಳನ್ನು ಕಳೆದುಕೊಂಡ ಅನ್ನದಾತ ಕಂಗಾಲಾಗಿದ್ದಾನೆ. ಇನ್ನು ಇಂದು ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಶಾಸಕ ಸ್ವರೂಪ್ ಪ್ರಕಾಶ್ ಹಾಗೂ ಮುಖಂಡರನ್ನು ಮಹಿಳೆಯೊಬ್ಬರು ತರಾಟೆಗೆ ತೆಗೆದುಕೊಂಡಿದ್ದಾರೆ.
ಭಾರೀ ಮಳೆಯಿಂದ ಹಾಸನ ಜಿಲ್ಲೆಯ ಹಲವೆಡೆ ಅಪಾದ ಪ್ರಮಾಣದ ಹಾನಿ ಸಂಭವಿಸಿದೆ. ಇನ್ನು ಹಾನಿಗೊಳಗಾದ ಕುಟುಂಬಗಳು ನಮಗೆ ಪರಿಹಾರ ಕೊಡುವಂತೆಯೂ ಸರ್ಕಾರಕ್ಕೆ ಆಗ್ರಹಿಸಿದ್ದವು. ಹಾಗೆಯೇ ಇಂದು ಹಾಸನದ ಹೊಯ್ಸಳ ನಗರದಲ್ಲಿನ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕ ಸ್ವರೂಪ್ ಪ್ರಕಾಶ್ ಮತ್ತು ಇತರ ಮುಖಂಡರನ್ನು ಮಹಿಳೆಯೊಬ್ಬರು ತರಾಟೆ ತೆಗೆದುಕೊಂಡ ಘಟನೆ ನಡೆಯಿತು.
ನಾವು ಹತ್ತು ವರ್ಷದಿಂದ ಸಮಸ್ಯೆ ಅನುಭವಿಸುತ್ತಿದ್ದೇವೆ. ಆದರೆ ಜನಪ್ರತಿನಿಧಿಗಳು ಅನಾಹುತಗಳು ಆದಾಗ ಮಾತ್ರ ಬರುತ್ತಾರೆ. ಆದರೆ ಸಮಸ್ಯೆಗಳನ್ನು ಬರೆಹರಸುವುದೇ ಇಲ್ಲ. ಆದ್ದರಿಂದ ನಾವೇ ಪಬ್ಲಿಕ್ಸ್ ಚಂದಾ ಎತ್ತಿ ಕೆಲಸ ಮಾಡಿಸುತ್ತೇವೆ ಎಂದು ಆಕ್ರೋಶ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ನಿನ್ನೆ ಸುರಿದ ಮಳೆಯಿಂದ ನಮ್ಮ ಮನೆಗಳು ಜಲಾವೃತವಾಗಿದ ಹಿನ್ನೆಲೆ ಮನೆಯಲ್ಲಿದ್ದ ದಿನ ಬಳಕೆ ವಸ್ತುಗಳೆವೂ ಹಾಳಾಗಿವೆ. ಮತ್ತು ರಾತ್ರಿ 2 ಗಂಟೆವರೆಗೂ ಕಷ್ಟ ಅನುಭವಿಸಿದ್ದೇವೆ ಎಂದು ಅಳಲು ತೋಡಿಕೊಂಡರು.
Karnataka Rain: ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಉಳಿದ ಜಿಲ್ಲೆಗಳ ಮಳೆ ವರದಿ
ಕಷ್ಟಪಟ್ಟು ನಾವು ವಸ್ತುಗಳನ್ನ ಖರೀದಿಸಿದ್ದೆವು. ಕಳೆದ ಬಾರಿ ಪ್ರಜ್ವಲ್ ರೇವಣ್ಣನವರೇ ಬಂದು ನೋಡಿದ್ದರು. ಆದರೆ ಇಲ್ಲಿಯವರೆಗೂ ಯವುದೇ ಸಮಸ್ಯೆಗಳು ಇತ್ಯರ್ಥ ಆಗಿಲ್ಲ. ಪ್ರಜ್ವಲ್ ರೇವಣ್ಣ ನೀರೋಳಗೆ ಬಂದು ನೋಡಿದ್ರಲ್ಲ ಅವರು ಏನು ಮಾಡಿದ್ರು ಎಂದು ಕ್ಲಾಸ್ ತೆಗೆದುಕೊಂಡರು. ನಂತರ ಶಾಸಕ ಸ್ವರೂಪ್ ಅವರು ರೊಚ್ಚಿಗೆದ್ದ ಮಹಿಳೆಯನ್ನು ಸಮಾಧಾನ ಪಡಿಸಲು ಯತ್ನಿಸಿದ್ದಾರೆ.
ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಮಳೆ ಅವಾಂತರ
ಕಳೆದ ಎರಡು ವಾರಗಳಿಂದ ರಾಜ್ಯದ ಕರಾವಳಿ ಭಾಗದಲ್ಲಷ್ಟೇ ಮುಂಗಾರು ಮಳೆ ಆರ್ಭಟ ಹೆಚ್ಚಾಗಿತ್ತು. ಆದರೆ ಇದೀಗ ಹಲವು ಜಿಲ್ಲೆಗಳಲ್ಲಿ ಮುಂಗಾರು ಶುರುವಾಗಿದೆ. ಅದೇ ರೀತಿ ಮಂಗಳವಾರ (ಜೂನ್ 20) ಬೆಳಗ್ಗೆಯಿಂದಲೂ ಹಾಸನ ಮತ್ತು ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಹಾಗಾದಾರೆ ಯಾವ ಭಾಗಗಳಲ್ಲಿ ಹೆಚ್ಚು ಮಳೆಯಾಗಿದೆ ಹಾಗೂ ಯಾವೆಲ್ಲ ಅನಾಹುತಗಳು ಸಂಭವಿಸಿವೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ಚಿಕ್ಕಮಗಳೂರು ನಗರ, ಸಖರಾಯಪಟ್ಟಣ, ಉದ್ದೇಬೋರಹಳ್ಳಿಯಲ್ಲಿ ಕಳೆದೊಂದು ಗಂಟೆಯಿಂದಲೂ ಭಾರೀ ಮಳೆ ಸುರಿದಿದ್ದು, ಇಲ್ಲಿನ ರಸ್ತೆಗಳೆಲ್ಲ ಕೆರೆಯಂತಾಗಿ ಮಾರ್ಪಟ್ಟಿವೆ. ಇದರಿಂದ ವಾಹನ ಸವಾರರು ಮುಂದಕ್ಕೂ ಹೋಗದೆ, ಹಿಂದಕ್ಕೂ ಬಾರದೆ ನಡುರಸ್ತೆಯಲ್ಲೇ ಪರದಾಡಿದ ಘಟನೆಗಳು ನಡೆದಿವೆ.
ಹಾಗೆಯೇ ಹಾಸನ ಜಿಲ್ಲೆಯ ಹಲವೆಡೆ ನಿನ್ನೆ ಭಾರೀ ಮಳೆಯಾಗಿದ್ದು, ಪರಿಣಾಮ ರಸ್ತೆಗಳೆಲ್ಲ ಕೆರೆಯಂತಾಗಿ ವಾಹನಗಳು ನೀರಲ್ಲಿ ಕೊಚ್ಚಿಕೊಂಡುಹೋದ ಘಟನೆಗಳು ನಡೆದಿದ್ದವು. ಅಲ್ಲದೆ ಶಾಲೆ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಕೂಡ ಪರದಾಡಿದ್ದರು. ಇನ್ನು ಕೆಲವು ಕಡೆ ಚರಂಡಿಗಳು ತುಂಬಿ ಹರಿಯುತ್ತಿದ್ದು, ಇದರಿಂದ ನಗರ ಪ್ರದೇಶದ ಸ್ಲಂಗಳಲ್ಲಿನ ಜನ ಜೀವನ ಅಸ್ತವ್ಯಸ್ತವಾಗಿದೆ.
English summary
Rain damage: A Women outrage against mla Swaroop Prakash in Hassan’s hoysala nagar.