ಹುಬ್ಬಳ್ಳಿಯಲ್ಲಿ ಪ್ಲೈಓವರ್ ನಿರ್ಮಾಣ ಕಾಮಗಾರಿ ವೇಳೆ ನೆಲಕ್ಕುರುಳಿದ ಕ್ರೇನ್ | Crane collapsed during flyover construction work in Hubballi

Hubballi

lekhaka-Sandesh R Pawar

By ಹುಬ್ಬಳ್ಳಿ ಪ್ರತಿನಿಧಿ

|

Google Oneindia Kannada News

ಹುಬ್ಬಳ್ಳಿ, ಜೂನ್‌, 20: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆ ಮಾಡುವ ನಿಟ್ಟಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಪ್ಲೈಓವರ್ ಕಾಮಗಾರಿ ಆರಂಭದಲ್ಲಿಯೇ ಅವಾಂತರವೊಂದನ್ನು ಸೃಷ್ಟಿಸಿದೆ.

ವಿದ್ಯುತ್ ತಂತಿಯ ಮೇಲೆ ಕ್ರೇನ್ ಮುಗುಚಿಬಿದ್ದ ಪರಿಣಾಮ ಎರಡು ಬೈಕ್‌ಗಳು ಜಖಂಗೊಂಡಿದ್ದು, ಕೆಲಕಾಲ ಸಂಚಾರ ವ್ಯವಸ್ಥೆ ಸ್ಥಗಿತಗೊಂಡ ಘಟನೆ ಹುಬ್ಬಳ್ಳಿಯ ದೇಸಾಯಿ ವೃತ್ತದ ಬಳಿ ನಡೆದಿದೆ.

Crane collapsed during flyover construction work in Hubballi, here see details

ರಸ್ತೆ ಮೇಲು ಸೇತುವೆ ನಿರ್ಮಾಣ ಕಾಮಗಾರಿ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಆಯತಪ್ಪಿ ಬಿದ್ದಿರುವ ಕ್ರೇನ್‌ನಿಂದ ವಿದ್ಯುತ್ ಕಂಬಗಳು ನೆಲಕ್ಕೆ ಅಪ್ಪಳಿಸಿವೆ. ಸದ್ಯ ಈ ವೇಳೆ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದ್ದ ಕಾರಣ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಹುಬ್ಬಳ್ಳಿ ಹಳೇ ಕೋರ್ಟ್ ವೃತ್ತದಿಂದ ಕೇಶ್ವಾಪುರ ಸರ್ಕಲ್‌ವರೆಗಿನ ರಸ್ತೆ ಸಂಚಾರ ಬಂದ್ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯಲ್ಲಿ ಏಕಕಾಲಕ್ಕೆ 170 ಪೊಲೀಸ್ ಸಿಬ್ಬಂದಿ ವರ್ಗಾವಣೆ, ಏಕೆ?, ಇಲ್ಲಿದೆ ವಿವರಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯಲ್ಲಿ ಏಕಕಾಲಕ್ಕೆ 170 ಪೊಲೀಸ್ ಸಿಬ್ಬಂದಿ ವರ್ಗಾವಣೆ, ಏಕೆ?, ಇಲ್ಲಿದೆ ವಿವರ

ಗೋಡೆ ಕುಸಿದು ವಿದ್ಯಾರ್ಥಿ ಸಾವು

ನಿರ್ಮಾಣ ಹಂತದ ಗೋಡೆ ಕುಸಿದು ವಿದ್ಯಾರ್ಥಿಯೋರ್ವ ಧಾರುಣವಾಗಿ ಸಾವನ್ನಪ್ಪಿದ್ದು, ಮತ್ತೋರ್ವ ವಿಧ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ‌ ಶಾಲೆಯ ಆವರಣದಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.

ವಿಶೃತ್ ಬೆಳಗಲಿ (9) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಪ್ರಜ್ವಲ್ ಎಂಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಆಟವಾಡುವ ಸಂದರ್ಭ ಏಕಾಏಕಿ ಗೋಡೆ ಕುಸಿದು ಬಿದ್ದು ಈ ಘಟನೆ ನಡೆದಿದೆ. ಬೆಳಗ್ಗೆ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳು ಅಪಘಾತಕ್ಕೆ ತುತ್ತಾಗಿದ್ದಾರೆ.

ನಿರ್ಮಾಣ ಹಂತದ ಕಟ್ಟಡದ ಕೆಳಗೆ ಆಡವಾಡುವಾಗ ಈ ಘಟನೆ ನಡೆದಿದ್ದು, ಸ್ಥಳದಲ್ಲೇ ವಿದ್ಯಾರ್ಥಿ ವಿಶೃತ್ ಬೆಳಗಲಿ ಸಾವನ್ನಪ್ಪಿದ್ದು, ಇನ್ನೋರ್ವ ಗಾಯಗೊಂಡ ವಿದ್ಯಾರ್ಥಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿತ್ತು.

English summary

Crane collapsed during flyover construction work in Hubballi, here see details

Story first published: Tuesday, June 20, 2023, 19:25 [IST]

Source link