ಹುಬ್ಬಳ್ಳಿ: ಸೋರುತಿಹುದು ಹೊಸ ಬಸ್‌ ನಿಲ್ದಾಣ ಕಟ್ಟಡದ ಮೇಲ್ಛಾವಣಿ, ಪ್ರಯಾಣಿಕರ ಪರದಾಟ | Bus stand building’s roof Damage in Hubballi

Hubballi

lekhaka-Sandesh R Pawar

By ಹುಬ್ಬಳ್ಳಿ ಪ್ರತಿನಿಧಿ

|

Google Oneindia Kannada News

ಹುಬ್ಬಳ್ಳಿ, ಜುಲೈ, 27: ಮಳೆಯ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆ ಧಾರವಾಡ ಜಿಲ್ಲೆಯಲ್ಲಿ ಬಹುತೇಕ ಸರ್ಕಾರಿ ಸ್ವಾಮ್ಯದ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿವೆ. ಇದಕ್ಕೆ ಸಾಕ್ಷಿ ಎಂಬುವಂತೇ ಹುಬ್ಬಳ್ಳಿಯಿಂದ ಬೆಂಗಳೂರು, ಚೆನ್ನೈ, ಹೈದರಾಬಾದ್‌ ಸೇರಿ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ಕೇಂದ್ರೀಯ ಹೊಸ ಬಸ್‌ನಿಲ್ದಾಣದ ಕಟ್ಟಡದ ಮೇಲ್ಛಾವಣಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಸಿಬ್ಬಂದಿ ವಿಶ್ರಾಂತಿ ಗೃಹದ ಗೋಡೆಗಳು ಮಳೆಗೆ ತೇವವಾಗಿದ್ದು, ನೆಮ್ಮದಿಯ ನಿದ್ದೆಗೂ ಅವರು ಪರದಾಡುವಂತಹ ಪರಿಸ್ಥಿನಿ ನಿರ್ಮಾಣವಾಗಿದೆ.

ಶಿಥಿಲಗೊಂಡಿರುವ ಮೇಲ್ಛಾಣಿಯಿಂದ ಮಳೆ ನೀರು ಸೋರುತ್ತಿದ್ದು, ಪ್ರಯಾಣಿಕರು ಕೊಡೆಗಳನ್ನು ಹಿಡಿದು ಆಸನದಲ್ಲಿ ಕೂರುವಂತಾಗಿದೆ. ಬಸ್‌ ನಿಲ್ದಾಣದ ಮೇಲ್ಛಾವಣಿ ಮೇಲೆ ನೀರು ನಿಂತು ಪುಟ್ಟ ಕೆರೆಯಂತಾಗಿದೆ. ಇನ್ನು ನಿಲ್ದಾಣದಲ್ಲಿನ 15 ಪ್ಲಾಟ್‌ಫಾರ್ಮ್‌ಗಳು ಸೋರುತ್ತಿದ್ದು, 12ನೇ ಪ್ಲಾಟ್‌ಫಾರ್ಮ್‌ ಸಂಪೂರ್ಣ ಜಲಾವೃತವಾಗಿದೆ.

Bus stand buildings roof Damage in Hubballi

ಪ್ರವೇಶ ದ್ವಾರದ ಬಲಭಾಗದಲ್ಲಿ ಟೆಂಡರ್‌ ಪಡೆದಿರುವ ಎರಡು ಅಂಗಡಿಗಳಿದ್ದು, ಸೋರುವ ಮಳೆ ನೀರಿನಿಂದ ರಕ್ಷಿಸಿಕೊಳ್ಳಲು, ಮುಂಭಾಗಕ್ಕೆ ಚಾವಣೆ ಹಾಕಿಕೊಂಡಿದ್ದಾರೆ. ಪ್ರಯಾಣಿಕರು ಸೂಟ್‌ಕೇಸ್, ಬ್ಯಾಗ್‌ಗಳನ್ನು ಹೊತ್ತುಕೊಂಡು ಆಯಾ ಪ್ಲಾಟ್‌ಫಾರ್ಮ್‌ಗಳಿಗೆ ನೀರಿನಲ್ಲೇ ದಾಟಿಕೊಂಡು ಹೋಗಬೇಕಾಗಿದ್ದು, ಮಳೆ ನೀರು ಸೋರದಂತೆ ನಿಯಂತ್ರಿಸಲು ಕಟ್ಟಡದ ಕೆಲ ಕಡೆ ಭೀಮ್‌ಗಳಿಗೆ ಶೀಟ್‌ ಹಾಕಲಾಗಿದೆ. ಸಿಬ್ಬಂದಿ ವಿಶ್ರಾಂತಿಗೃಹದ ಗೋಡೆಗಳು ತೇವಗೊಂಡಿದ್ದು, ಒಂದು ಭಾಗವನ್ನು ಈತ್ತೀಚೆಗಷ್ಟೇ ಸರಿಪಡಿಸಿ ಪ್ಲಾಸ್ಟರ್‌ ಮಾಡಲಾಗಿದೆ. ಆದರೆ, ಪೂರ್ಣ ಪ್ರಮಾಣದ ಸುವ್ಯವಸ್ಥೆ ಮಾಡಲಾಗಿಲ್ಲ.

ಹುಬ್ಬಳ್ಳಿ: ಭಾರೀ ಮಳೆಗೆ ಕುಸಿದು ಬಿದ್ದ ಮನೆಹುಬ್ಬಳ್ಳಿ: ಭಾರೀ ಮಳೆಗೆ ಕುಸಿದು ಬಿದ್ದ ಮನೆ

ಸರ್ಕಾರದ ಕಟ್ಟಡದ ಬಾಳಿಕೆ ಅವಧಿ ಕನಿಷ್ಠ 60 ವರ್ಷಗಳಾಗಿವೆ. 2000ನೇ ಇಸವಿಯಲ್ಲಿ ಬಸ್‌ ನಿಲ್ದಾಣ ಉದ್ಘಾಟನೆಯಾಗಿದೆ. ಅನುದಾನ ಕೊರತೆಯಿಂದ ಬಸ್‌ ನಿಲ್ದಾಣ ನಿರ್ವಹಣೆ ಕಷ್ಟವಾಗಿದೆ. ಪೈಪ್‌ಗಳಲ್ಲಿ ಕಸ ತುಂಬಿದ್ದು, ಮಳೆ ನೀರು ಹರಿಯುವುದಿಲ್ಲ. ಆದ್ದರಿಂದ ಚಾವಣಿ ಮೇಲೆ ನೀರು ಹರಿಯದೇ ಸೋರುತ್ತದೆ. ಇದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಾಯವ್ಯ ಸಾರಿಗೆ ಸಂಸ್ಥೆಯ ಕಾರ್ಯನಿರ್ವಾಹಕ ಎಂಜಿನಿಯರ್ ಮಾಹಿತಿ ನೀಡಿದ್ದಾರೆ.

English summary

Bus stand building’s roof Damage due to heavy rain in Hubballi, Passengers worried,

Story first published: Thursday, July 27, 2023, 13:16 [IST]

Source link