Dharwad
oi-Gururaj S
ಧಾರವಾಡ, ಜೂನ್ 19; ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಆಯ್ಕೆಗೆ ಮಂಗಳವಾರ ಚುನಾವಣೆ ನಡೆಯಲಿದೆ. ಆದರೆ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತದಾನ ಮಾಡುವ ಅವಕಾಶವಿಲ್ಲ. ಅವರ ಧಾರವಾಡ ಭೇಟಿಗೆ ಕೋರ್ಟ್ ಅನುಮತಿ ನೀಡಿಲ್ಲ.
ಜೂನ್ 20ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಪಾಲ್ಗೊಳ್ಳಲು ಧಾರವಾಡ ಭೇಟಿಗೆ ಅವಕಾಶ ನೀಡಬೇಕು ಎಂದು ವಿನಯ್ ಕುಲಕರ್ಣಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.
ಶೆಟ್ಟರ್‌ಗೆ ಶಾಕ್ ನೀಡಿದ ಬಿಎಸ್‌ವೈ, ಜೋಶಿ: ಬಿಜೆಪಿ ಸೇರಿದ ಹು-ಧಾ ಪಾಲಿಕೆ ಮಾಜಿ ಮೇಯರ್
ಸೋಮವಾರ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ. ಜಯಂತ್ ಕುಮಾರ್ ಅರ್ಜಿಯನ್ನು ತಿರಸ್ಕಾರ ಮಾಡಿದರು. ವಿನಯ್ ಕುಲಕರ್ಣಿ ಧಾರವಾಡಕ್ಕೆ ಭೇಟಿ ನೀಡಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.
ಶಾಸಕ ವಿನಯ್ ಕುಲಕರ್ಣಿ ಕ್ಷೇತ್ರದಲ್ಲಿ ಏಜೆಂಟ್‌ಗಳ ಹಾವಳಿ: ರೈತರ ಆಕ್ರೋಶ
ಬಿಜೆಪಿ ನಾಯಕ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಆರೋಪಿ. ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಅವರಿಗೆ ಜಾಮೀನು ನೀಡುವಾಗ ಧಾರವಾಡಕ್ಕೆ ಭೇಟಿ ನೀಡದಂತೆ ಷರತ್ತು ಹಾಕಿದೆ. ಈ ಷರತ್ತು ಸಡಿಲಿಕೆ ಮಾಡುವಂತೆ ಅವರು ಹಲವು ಬಾರಿ ಮನವಿ ಮಾಡಿದ್ದಾರೆ. ಆದರೆ ಧಾರವಾಡ ಭೇಟಿಗೆ ಅವಕಾಶ ಸಿಕ್ಕಿಲ್ಲ.
Dharawad Rural Election Results: ಕ್ಷೇತ್ರಕ್ಕೆ ಕಾಲಿಡದೇ ಗೆದ್ದು ಬೀಗಿದ ವಿನಯ್ ಕುಲಕರ್ಣಿ
ಚುನಾವಣೆಯಲ್ಲಿ ಗೆಲುವು; ಕಾಂಗ್ರೆಸ್ ಪಕ್ಷ ಈ ಬಾರಿಯ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಲ್ಲಿ ವಿನಯ್ ಕುಲಕರ್ಣಿಗೆ ಟಿಕೆಟ್ ನೀಡಿತ್ತು. 89333 ಮತಗಳನ್ನು ಪಡೆದು ಅವರು ಜಯಗಳಿಸಿದ್ದಾರೆ. ಚುನಾವಣೆ ಸಮಯದಲ್ಲಿಯೂ ಧಾರವಾಡಕ್ಕೆ ಹೋಗಿ ಪ್ರಚಾರ ನಡೆಸಲು ಅವರು ಅನುಮತಿ ಕೇಳಿದ್ದರು. ಆದರೆ ಕೋರ್ಟ್ ಧಾರವಾಡಕ್ಕೆ ಪ್ರವೇಶ ನಿರಾಕರಿಸಿತ್ತು.
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಥಳೀಯ ಶಾಸಕರು, ಎಂಎಲ್‌ಸಿಗಳಿಗೆ ಮತದಾನದ ಹಕ್ಕು ಇರುತ್ತದೆ. ಮಂಗಳವಾರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಇರುವುದರಿಂದ ವಿನಯ್ ಕುಲಕರ್ಣಿ ಧಾರವಾಡ ಭೇಟಿಗೆ ಅನುಮತಿ ಕೇಳಿದ್ದರು.
ಚುನಾವಣೆ ಅಧಿಸೂಚನೆ ಪ್ರಕಟ; ಜೂನ್ 20ರಂದು ನಡೆಯುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಚುನಾವಣಾ ಅಧಿಸೂಚನೆಯನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ ಪ್ರಕಟಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ಚುನಾವಣೆಯನ್ನು ಜೂನ್ 20ರಂದು ನಿಗದಿ ಪಡಿಸಲಾಗಿದೆ. ಮುಂಜಾನೆ 9 ರಿಂದ 11 ಗಂಟೆಯವರೆಗೆ ಧಾರವಾಡದ ಪಾಲಿಕೆಯ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಭಾಭವನದಲ್ಲಿ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತದೆ ಮತ್ತು ಮಧ್ಯಾಹ್ನ 1 ಗಂಟೆಗೆ ಸಭೆ ಪ್ರಾರಂಭವಾಗಲಿದೆ.
ನಿಯಮಾವಳಿಯಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು 22ನೇ ಅವಧಿಯ ಚುನಾವಣೆಗೆ ಮಹಾಪೌರ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪ ಮಹಾಪೌರ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿಯನ್ನು ನಿಗದಿಗೊಳಿಸಲಾಗಿದೆ.
ಮಹಾಪೌರ ಮತ್ತು ಉಪಮಹಾಪೌರ ಸ್ಥಾನಕ್ಕೆ ನಡೆಯುವ ಚುನಾವಣೆ ಪ್ರಕ್ರಿಯೆಯಲ್ಲಿ ಸ್ವೀಕರಿಸಿದ ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ ಪ್ರಕ್ರಿಯೆ ಇದೆ.
ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, ನಡುವಳಿಕೆ ಪುಸ್ತಕದಲ್ಲಿ ಸದಸ್ಯರ ಸಹಿ ದಾಖಲಿಸುವುದು, ಮತಗಳ ಎಣಿಕೆ ಹಾಗೂ ಫಲಿತಾಂಶ ಘೋಷಣೆ ನಿಯಮಾನುಸಾರ ನಡೆಯಲಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಹಾಪೌರ ಹಾಗೂ ಉಪ ಮಹಾಪೌರ ಚುನಾವಣೆಯು ಚುನಾವಣಾಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ ನೇತೃತ್ವದಲ್ಲಿ ನಡೆಯಲಿದೆ.
English summary
Hubballi Dharwad Municipal Corporation (HDMC) mayor and deputy mayor election on June 20. Court not allowed Dharwad Congress MLA Vinay Kulkarni to visit Dharwad and vote in elections.