Chikkamagaluru
lekhaka-Veeresha H G
ಚಿಕ್ಕಮಗಳೂರು, ಜುಲೈ 30: ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ನಡೆದಿದೆ.
ಕೋಲಾರದಿಂದ ಹೊರನಾಡಿಗೆ ಹೋಗುತ್ತಿದ್ದ ಕಾರು ಕಲ್ಮಕ್ಕಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಮನೆಯ ಮುಂಭಾಗಕ್ಕೆ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಒಂಬತ್ತು ಜನರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳು ಕೋಲಾರದಿಂದ ಹೊರನಾಡಿಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.
ಗಾಯಗೊಂಡ ಪ್ರವಾಸಿಗರನ್ನು ತಕ್ಷಣವೇ ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.
ಕೋಲಾರ ಲಾರಿಗೆ ಬೈಕ್ ಡಿಕ್ಕಿ
ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಆರ್‌ಟಿಓ ಚೆಕ್ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ವಾಹನವನ್ನು ಯಾವುದೇ ಸಿಗ್ನಲ್ ನೀಡದೆ ಏಕಾಏಕಿ ನಿಲ್ಲಿಸಿದ ಹಿನ್ನಲೆಯಲ್ಲಿ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ವ್ಯಕ್ತಿಯ ಕಾಲು ಮುರಿದಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಗೆ ಆರ್ಟಿಒ ಚೆಕ್ಪೋಸ್ಟ್ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣವೆಂದು ಸ್ಥಳೀಯರು ಆಕ್ರೋಶ ವ್ಯಕ್ಯಪಡಿಸಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವೀಲ್ಹಿಂಗ್‌ನಿಂದ ಅಪಘಾತ: ಇಬ್ಬರ ಸ್ಥಿತಿ ಗಂಭೀರ
ಬೈಕ್ ವೀಲ್ಹಿಂಗ್ ಮಾಡುವ ವೇಳೆ ಕಾರಿಗೆ ಬೈಕ್ ಡಿಕ್ಕಿಯಾದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ನಗರದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿದ್ದು, ಮದ್ದೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಂಡ ಕಂಡಲ್ಲಿ ಪುಂಡರ ವೀಲ್ಹಿಂಗ್ ಹಾವಳಿ ಹೆಚ್ಚಾಗುತ್ತಿದ್ದು, ಈ ಬಗ್ಗೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಾಹನ ಸವಾರರು ಆಗ್ರಹಿಸಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವೀಲ್ಹಿಂಗ್ ನಡೆಸುವ ಮೂಲಕ ಪುಂಡರು ಇತರರ ಜೀವದ ಜೊತೆ ಆಟವಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
English summary
9 people injured in Car accident at Chikkamagaluru Kalasa Taluk. Know more.
Story first published: Sunday, July 30, 2023, 17:57 [IST]