The New Indian Express
ಬೆಂಗಳೂರು: ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಮಾಸ್ಕ್ ಕಡ್ಡಾಯಗೊಳಿಸಿದ ನಂತರ ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ‘ದಂಡ’ ಹಾಕುವ ಬಗ್ಗೆಯೂ ಚಿಂತಿಸುತ್ತಿದೆ.
ಬಿಬಿಎಂಪಿ ಆರೋಗ್ಯ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿದಿನ 17,000 ಪರೀಕ್ಷೆಗಳನ್ನು ಮಾಡಲಾಗುತ್ತದೆ. ಅದರಲ್ಲಿ 600 ರಿಂದ 700 ಪ್ರಕರಣಗಳು ಪತ್ತೆಯಾಗುತ್ತಿವೆ. ಗಂಭೀರ ಪರಿಸ್ಥಿತಿ ಇಲ್ಲದಿರುವುದರಿಂದ ಮನೆಯಲ್ಲೇ ಐಸೋಲೇಷನ್ ಆಗುತ್ತಿದ್ದು ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
‘ಕೇವಲ 60 ಪ್ರಕರಣಗಳು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದು 10 ಇತರರು ವಿವಿಧ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೀನೋಮ್ ಅನುಕ್ರಮವೂ ಸಹ ನಡೆಯುತ್ತಿದೆ ಎಂದು ತ್ರಿಲೋಕ್ ಚಂದ್ರ ಹೇಳಿದರು.
ಇದನ್ನೂ ಓದಿ: ಕೊರೋನಾ ದಿಢೀರ್ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 592 ಸೇರಿ ರಾಜ್ಯದಲ್ಲಿ 617 ಮಂದಿಗೆ ಪಾಸಿಟಿವ್; ಸಾವು ಶೂನ್ಯ
ಕಡ್ಡಾಯ ಮಾಸ್ಕ್ ನಿಯಮವನ್ನು ಸಾರ್ವಜನಿಕರು ಗಂಭೀರವಾಗಿ ಪರಿಗಣಿಸದಿರುವುದು ಕಂಡುಬಂದಿರುವುದರಿಂದ ದಂಡ ಹಾಕುವಂತೆ ತಾಂತ್ರಿಕ ಸಲಹಾ ಸಮಿತಿಯು ಸೂಚಿಸಿದ್ದು ಮಹದೇವಪುರ ವಲಯದಲ್ಲಿ ಪ್ರಕರಣಗಳು ಹೆಚ್ಚಿರುವುದರಿಂದ ಲಸಿಕೆ ಮತ್ತು ಬೂಸ್ಟರ್ ಡೋಸ್ ಹೆಚ್ಚಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಆಯುಕ್ತರು ಒತ್ತಿ ಹೇಳಿದರು.
ಪಾಲಿಕೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಿದ್ದು, ನಿರ್ಧಾರವನ್ನು ಸರ್ಕಾರಕ್ಕೆ ಬಿಡಲಾಗಿದೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App