Online Desk
ಬೆಂಗಳೂರು: ಜಗತ್ತಿನ ಗಮನ ಸೆಳೆಯುತ್ತಿರುವ ಬೆಂಗಳೂರು ನಗರ ಇನ್ನಷ್ಟು ಬೆಳೆಯಬೇಕು. ಆ ದಿಸೆಯಲ್ಲಿ ರಾಜ್ಯ ಸರ್ಕಾರ ದೃಢವಾದ ಹೆಜ್ಜೆಗಳನ್ನು ಇಡಬೇಕು ಎಂದು ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸೋಮವಾರ ನಡೆದ ನಾಡಪ್ರಭು ಕೆಂಪೇಗೌಡರ 513ನೇ ಜಯಂತ್ಯುತ್ಸವದಲ್ಲಿ ‘ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದರು. 1998-99ರಲ್ಲಿ ರಾಷ್ಟ್ರದ ಸಿಲಿಕಾನ್ ಕೇಂದ್ರ ಯಾವ ನಗರ ಆಗಬೇಕು ಎಂಬ ವಿಷಯದಲ್ಲಿ ಬೆಂಗಳೂರು ಮತ್ತು ಹೈದರಾಬಾದ್ ನಡುವೆ ತೀವ್ರ ಪೈಪೋಟಿ ಇತ್ತು. ಅಂತಿಮವಾಗಿ ಬೆಂಗಳೂರು ಯಶಸ್ಸು ಪಡೆಯಿತು. ಅದನ್ನು ಉಳಿಸಿಕೊಂಡು ಹೋಗಬೇಕಿದೆ ಎಂದರು.
ದೇಶದ ಅತ್ಯಂತ ಹಿರಿಯ ಸ್ವಾತಂತ್ರ್ಯ ಯೋಧ ಕೆಂಪೇಗೌಡ ಎಂದು ಎಸ್ ಎಂ ಕೃಷ್ಣ ಬಣ್ಣಿಸಿದರು. ಬೆಂಗಳೂರನ್ನು ಸುಂದರವಾಗಿ ಮಾಡಲು ಅವರು ಮುಂದಾಗಿದ್ದರು. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ಇಟ್ಟಿದ್ದಕ್ಕೆ ಅಂದಿನ ಪ್ರಧಾನಿಯಾಗಿದ್ದ ಮನಹೋಹನ್ ಸಿಂಗ್ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಇದನ್ನೂ ಓದಿ: ಮಳೆ ಅವಾಂತರದಿಂದ ನಗರದ ಖ್ಯಾತಿಗೆ ಧಕ್ಕೆ: ‘ಬೆಂಗಳೂರು ಬ್ರ್ಯಾಂಡ್’ ಉಳಿಸಿಕೊಳ್ಳಲು ಸಿಎಂಗೆ ಎಸ್.ಎಂ. ಕೃಷ್ಣ ಪತ್ರ
ಕೆಂಪೇಗೌಡ ಅವರು ಬೆಂಗಳೂರಿನ ದಿಕ್ಕು ದೆಸೆಗಳನ್ನು ನಿರ್ಣಯಿಸಿದವರು. ಅವರು ಬೆಂಗಳೂರು ಬಗ್ಗೆ ದೊಡ್ಡ ಕನಸನ್ನು ಹೊಂದಿದ್ದರು. ಕೆಂಪೇಗೌಡರು ಯಾರೇ ಒಬ್ಬರ ಸ್ವತ್ತಲ್ಲ. ಅವರು ಕುವೆಂಪು ಹೇಳಿದ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದ ಜನರ ಸ್ವತ್ತು ಎಂದರು. ಬೆಂಗಳೂರು ಜನರು ಎಲ್ಲ ಒತ್ತಡಕ್ಕೆ ಮಣಿಯದೆ ನಿಂತು ಬೆಂಗಳೂರು ಕಟ್ಟಿದ್ದಾರೆ. ಬೆಂಗಳೂರು ಸಿಲಿಕಾನ್ ಸಿಟಿ ಆಗಲು ಲಕ್ಷಾಂತರ ಯುವಕ-ಯುವತಿಯರ ಕಮಿಟ್ಮೆಂಟ್, ಶೃದ್ಧೆ ಇದರ ಹಿಂದಿದೆ ಎಂದು ಸ್ಮರಿಸಿಕೊಂಡರು.
For more news update stay with actp news
Android App
Facebook
Twitter
Dailyhunt
Share Chat
Telegram
Koo App