ANI
ಜೈಪುರ: ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ ಸ್ಥಳೀಯ ಟೇಲರ್ ಅನ್ನು ದುಷರ್ಮಿಗಳು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ತಾನದ ಉದಯಪುರದಲ್ಲಿ ನಡೆದಿದೆ.
ಮಾಲ್ದಾಸ್ ಸ್ಟ್ರೀಟ್ ಪ್ರದೇಶದಲ್ಲಿ ಇಬ್ಬರು ಕಿಡಿಗೇಡಿಗಳು ವ್ಯಕ್ತಿಯ ಶಿರಚ್ಛೇದ ಮಾಡಿದ್ದು, ಬಳಿಕ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಹಂತಕರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಬೆದರಿಕೆ ಹಾಕಿದ್ದಾರೆ.
A creed which has terror as its foundational base can only be defeated by instilling bigger terror amongst the practitioners https://t.co/shLKlNUMk7
— Vikas Saraswat (@VikasSaraswat) June 28, 2022
ಇದನ್ನೂ ಓದಿ: ರಾಜಸ್ತಾನ: ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್; ಹಾಡಹಗಲೇ ವ್ಯಕ್ತಿಯ ಕತ್ತು ಸೀಳಿ ಬರ್ಬರ ಹತ್ಯೆ!
ಹಾಡುಹಗಲೇ ನಡೆದ ಘಟನೆ ನಂತರ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಮಲ್ದಾಸ್ ಸ್ಟ್ರೀಟ್ ನಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ಘಟನೆ ಸಂಬಂಧ ಕೆಲವು ಆರೋಪಿಗಳನ್ನು ಗುರುತಿಸಲಾಗಿದ್ದು, ಆ ಮೂಲಕ ತನಿಖೆ ನಡೆಸಲಾಗುವುದು ಎಂದು ಉದಯಪುರ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ಚೌಧರಿ ಹೇಳಿದ್ದಾರೆ.
ಯುವಕನ ಬರ್ಬರ ಹತ್ಯೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಈ ಘಟನೆಯಲ್ಲಿ ಭಾಗಿಯಾಗಿರುವ ಕ್ರಿಮಿನಲ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಪೊಲೀಸರು ಎಲ್ಲಾ ಆಯಮಾಗಳಲ್ಲಿ ತನಿಖೆ ನಡೆಸುತ್ತಿದ್ದು, ಸಾರ್ವಜನಿಕರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.
Rajasthan | A man was beheaded by two men in Udaipur’s Maldas street area today. He had shared a social media post in support of Nupur Sharma, a few days ago.
The two men posted a video boasting about the beheading and threatened PM Modi’s life as well. pic.twitter.com/UhwrkDZQwe
— ANI MP/CG/Rajasthan (@ANI_MP_CG_RJ) June 28, 2022
For more news update stay with actp news
Android App
Facebook
Twitter
Dailyhunt
Share Chat
Telegram
Koo App