PTI
ರೂರ್ಕಿ (ಉತ್ತರಾಖಂಡ): ಲಿಫ್ಟ್ ನೀಡುವುದಾಗಿ ಹೇಳಿ ತಾಯಿ ಮತ್ತು ಆಕೆ ಮಗಳ ಮೇಲೆ ಚಲಿಸುವ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಉತ್ತರಾಖಂಡದಲ್ಲಿ ವರದಿಯಾಗಿದೆ.
ಹರಿದ್ವಾರದ ರೂರ್ಕಿಯಲ್ಲಿ ಮಹಿಳೆ ಮತ್ತು ಆಕೆಯ ಆರು ವರ್ಷದ ಮಗಳನ್ನು ತನ್ನ ಕಾರಿನಲ್ಲಿ ಲಿಫ್ಟ್ ನೀಡಿದ ನಂತರ ವ್ಯಕ್ತಿ ಮತ್ತು ಅವನ ಸ್ನೇಹಿತರು ಚಲಿಸುವ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಮಹಿಳೆ ತನ್ನ ಆರು ವರ್ಷದ ಮಗಳೊಂದಿಗೆ ಮುಸ್ಲಿಂ ಧಾರ್ಮಿಕ ಸ್ಥಳವಾದ ಪಿರಾನ್ ಕಲಿಯಾರ್ನಿಂದ ಮನೆಗೆ ಹೋಗುತ್ತಿದ್ದಾಗ, ಸೋನು ಎಂಬ ವ್ಯಕ್ತಿ ಲಿಫ್ಟ್ ಅನ್ನು ನೀಡಿದ್ದಾನೆ. ನಂತರ ಆತ ಗೆಳೆಯೊಂದಿಗೆ ಸೇರಿಕೊಂಡು ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಪ್ರಮೇಂದ್ರ ದೋವಲ್ ಮಾತನಾಡಿ, ವ್ಯಕ್ತಿಯ ಕೆಲವು ಸ್ನೇಹಿತರು ಈಗಾಗಲೇ ಕಾರಿನಲ್ಲಿದ್ದರು. ದೂರಿನ ಪ್ರಕಾರ, ಸೋನು ಮತ್ತು ಆತನ ಸಹಚರರು ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಅತ್ಯಾಚಾರವೆಸಗಿದ್ದಾರೆ. ನಂತರ ಇಬ್ಬರನ್ನೂ ಕಾಲುವೆಯ ಬಳಿ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಮಹಿಳೆ ಮಧ್ಯರಾತ್ರಿ ಪೊಲೀಸ್ ಠಾಣೆಗೆ ತಲುಪಿ ಪೊಲೀಸರಿಗೆ ಘಟನೆಯನ್ನು ವಿವರಿಸಿದರು ಎಂದು ತಿಳಿಸಿದರು.
ಪೊಲೀಸರ ಪ್ರಕಾರ, ಕಾರಿನಲ್ಲಿ ಎಷ್ಟು ಪುರುಷರು ಇದ್ದರು ಎಂದು ಮಹಿಳೆ ನಿಖರವಾಗಿ ಹೇಳಲು ಸಾಧ್ಯವಾಗಲಿಲ್ಲ, ಆದರೆ ಅದನ್ನು ಓಡಿಸುವ ವ್ಯಕ್ತಿಯ ಹೆಸರು ಸೋನು ಎಂದು ಹೇಳಿದರು. ಇಬ್ಬರನ್ನು ರೂರ್ಕಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App