PTI
ಉದಯಪುರ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ರಾಜಸ್ಥಾನದ ಉದಯಪುರದ ಟೈಲರ್ ಹತ್ಯೆಯ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ.
ಮಾಲ್ದಾಸ್ ಸ್ಟ್ರೀಟ್ ಪ್ರದೇಶದಲ್ಲಿ ಟೇಲರ್ ಶಿರಚ್ಛೇದ ಮಾಡಿ, ಬಳಿಕ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ಆರೋಪಿಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಬೆದರಿಕೆ ಹಾಕಿದ್ದರು. ಈ ಇಬ್ಬರು ದುಷ್ಕರ್ಮಿಗಳನ್ನು ರಾಜಸಮಂದ್ ನಿಂದ ಬಂಧಿಸಲಾಗಿದೆ.
ಇದನ್ನೂ ಓದಿ: ರಾಜಸ್ತಾನ: ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್; ಹಾಡಹಗಲೇ ವ್ಯಕ್ತಿಯ ಕತ್ತು ಸೀಳಿ ಬರ್ಬರ ಹತ್ಯೆ!
ಈ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ಕೈಗೊಳ್ಳುವ ಮೂಲಕ ಅಪರಾಧಿಗಳಿಗೆ ನ್ಯಾಯಾಲಯದಲ್ಲಿ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಸೋಮವಾರ ಉದಯ್ಪುರದಲ್ಲಿ ಇಬ್ಬರು ವ್ಯಕ್ತಿಗಳು ಟೈಲರ್ನ ಕತ್ತು ಸೀಳಿ ಹತ್ಯೆ ಮಾಡಿದ್ದರು. ಬಳಿಕ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಆರೋಪಿಗಳು ಇಸ್ಲಾಂ ಧರ್ಮವನ್ನು ಅವಮಾನಿಸಿದ್ದಕ್ಕಾಗಿ ಪ್ರತೀಕಾರವಾಗಿ ಈ ಕೃತ್ಯ ನಡೆಸಿರುವುದಾಗಿ ಹೇಳಿದ್ದಾರೆ. ಇದರಿಂದಾಗಿ ರಾಜಸ್ಥಾನದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿದೆ.
ಇದನ್ನೂ ಓದಿ: ಜೈಪುರ: ಪ್ರಧಾನಿ ಮೋದಿ ಹತ್ಯೆಯ ಬೆದರಿಕೆ ಹಾಕಿದ ಹಂತಕರು! ವಿಡಿಯೋ
ಆನ್ಲೈನ್ನಲ್ಲಿ ಪೋಸ್ಟ್ ಮಾಡಿದ ವೀಡಿಯೊ ಕ್ಲಿಪ್ನಲ್ಲಿ ದುಷ್ಕರ್ಮಿಯೊಬ್ಬ, ಟೈಲರ್ ನೊಬ್ಬನನ್ನು ಶಿರಚ್ಚೇದ ಮಾಡಿರುವುದಾಗಿ ಹೇಳಿರುವುದಲ್ಲದೇ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲ್ಲುವುದಾಗಿ ಹೇಳಿದ್ದಾನೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App