The New Indian Express
ಬೆಂಗಳೂರು: ಎನ್ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಬೆಂಗಳೂರಿಗೆ ವಾಪಸ್ಸಾದರು.
ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ನಾಮಪತ್ರ ಸಲ್ಲಿಸುವ ವೇಳೆ ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಹಾಜರಿರಬೇಕು ಎಂದು ಪಕ್ಷದ ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ನವದೆಹಲಿಗೆ ಮುಖ್ಯಮತ್ರಿ ಬೊಮ್ಮಾಯಿಯವರು ತೆರಳಿದ್ದರು.
ಜುಲೈ.18 ರಂದು ರಾಷ್ಟ್ರಪತಿ ಚುನಾವಣೆ ಇರುವ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚಣೆ ಮತ್ತಷ್ಟು ತಡವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಹೈಕಮಾಂಡ್ ಒಪ್ಪಿಗೆ ನೀಡಿದರೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಪುನರ್ ರಚನೆಯಾದರೆ ಖಾಲಿಯಿರುವ 5 ಸಚಿವ ಸ್ಥಾನಗಳು ಭರ್ತಿಯಾಗಲಿದೆ. ಆದರೆ, ಈ ಬಾರಿಯ ದೆಹಲಿ ಪ್ರವಾಸದಲ್ಲೂ ಹೈಕಮಾಂಡ್ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡದೆ ಇರುವುದು, ಸಚಿವಾಕಾಂಕ್ಷಿಗಳಲ್ಲಿ ನಿರಾಸೆಯನ್ನು ಮೂಡಿಸಿದೆ. ಈ ನಡುವೆ ಬಿಬಿಎಂಪಿ ಚುನಾವಣೆ ಕೂಡ ಹತ್ತಿರದಲ್ಲಿರುವ ಹಿನ್ನೆಲೆಯಲ್ಲಿ ಸಂಚಿವ ಸಂಪುಟ ಇನ್ನಷ್ಟು ತಡವಾಗಲಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಮೋದಿ ಭೇಟಿ ವೇಳೆ ನಿರ್ಮಾಣ ಮಾಡಿದ್ದ 6 ಕೋಟಿ ರೂ. ವೆಚ್ಚದ ರಸ್ತೆ ಮೂರೇ ದಿನಕ್ಕೆ ಕುಸಿತ, ಸಮಗ್ರ ವರದಿಗೆ ಸಿಎಂ ಬೊಮ್ಮಾಯಿ ಸೂಚನೆ!
ಅಕ್ಟೋಬರ್ ತಿಂಗಳಿನಲ್ಲಿ ನಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಬೆಂಗಳೂರು ಅಭಿವೃದ್ಧಿ ಖಾತೆ ಬೊಮ್ಮಾಯಿ ಅವರ ಬಳಿ ಇರುವುದರಿಂದ ಮತ್ತಷ್ಟು ಒತ್ತಡಕ್ಕೆ ಸಿಲುಕಲಿದ್ದಾರೆಂದು ಹೇಳಲಾಗುತ್ತಿದೆ.
ಸಂಪುಟ ಪುನಾರಚನೆ ವೇಳೆ ಸಚಿವ ಸ್ಥಾನ ಕೈ ಬಿಟ್ಟು ಇಬ್ಬರು ಪ್ರಮುಖ ಆಕಾಂಕ್ಷಿಗಳಾದ ಆರ್.ಅಶೋಕ ಮತ್ತು ವಿ.ಸೋಮಣ್ಣ ಅವರಲ್ಲಿ ಒಬ್ಬರಿಗೆ ನೀಡುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
ಗುರುವಾರ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ ಅವರು ಪಕ್ಷದ ವರಿಷ್ಠರನ್ನು ಭೇಟಿ ಮಾಡಿಲ್ಲ ಮತ್ತು ಅಂತಹ ಯಾವುದೇ ಯೋಜನೆಗಳಿಲ್ಲ ಎಂದು ಹೇಳಿದ್ದರು. ಆದಾಗ್ಯೂ, ಶುಕ್ರವಾರ ಅವರು ಮುರ್ಮು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಸಂವಾದ ನಡೆಸಿದರು.
For more news update stay with actp news
Android App
Facebook
Twitter
Dailyhunt
Share Chat
Telegram
Koo App