Online Desk
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಿಂದ ಬಂದ ಒಂದು ದೂರವಾಣಿ ಕರೆ ರಾಜ್ಯ ರಾಜಕಾರಣಗಳಲ್ಲಿ ನಡುಕ ಉಂಟು ಮಾಡಿದೆ. 40% ಕಮಿಷನ್ ಆರೋಪ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವಾಗಲೇ ಈ ಕಮಿಷನ್ ಕರೆ ಭ್ರಷ್ಟರ ಎದೆಯಲ್ಲೂ ಆತಂಕ ಹುಟ್ಟು ಹಾಕಿದೆ.
ದೂರುದಾರರಿಗೆ ಮಾಹಿತಿ ನೀಡುವಂತೆ ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಕೆಂಪಣ್ಣಗೆ ಪ್ರಧಾನಿ ಕಚೇರಿಯಿಂದ ಕರೆ ಬಂದಿದೆ ಎನ್ನಲಾಗುತ್ತಿದೆ. ಈ ಹಿಂದೆ ರಾಜ್ಯ ಸರಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡಿ ಪ್ರಧಾನಿಗೆ ಕೆಂಪಣ್ಣ ದೂರು ನೀಡಿದ್ದರು. “ಅಧಿಕಾರಿಗಳು ನಿಮ್ಮನ್ನು ಸಂಪರ್ಕಿಸಲಿದ್ದಾರೆ. ಭ್ರಷ್ಟಾಚಾರದ ದಾಖಲೆ ನೀಡುವಂತೆ” ಪ್ರಧಾನಿ ಕಚೇರಿಯಿಂದ ಕರೆ ಮಾಡಲಾಗಿತ್ತು ಎನ್ನಲಾಗುತ್ತಿದೆ.
ಮೋದಿ ಬೆಂಗಳೂರಿಗೆ ಬರುವ ಮುನ್ನ ಕಳಪೆ ಕಾಮಗಾರಿಗೆ ಸಂಬಂಧಿಸಿದಂತೆ ಪ್ರಧಾನಿ ಕಾರ್ಯಾಲಯ ವರದಿ ತರಿಸಿಕೊಂಡಿತ್ತು. ಈ ಬಗ್ಗೆನೂ ತನಿಖೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತನಿಖೆಗೆ ಗೃಹ ಇಲಾಖೆಯ ತಂಡ ಬೆಂಗಳೂರಿಗೆ ಬರೋ ಸಾಧ್ಯತೆ ಇದೆ. ಗುತ್ತಿಗೆದಾರರ ಸಂಘವೂ ರಾಜ್ಯ ಸರ್ಕಾರದ ವಿರುದ್ಧ ಸಾಕಷ್ಟು ಆರೋಪ ಮಾಡಿತ್ತು. ದಾಖಲೆಯನ್ನು ಸಿದ್ದಪಡಿಸಿಕೊಳ್ಳಲು ಪ್ರಧಾನಿ ಕಾರ್ಯಾಲಯ ಸೂಚಿಸಿದೆ ಎಂದು ಹೇಳಲಾಗಿದ್ದು, ಕೆಂಪಣ್ಣ ಅವರು ಪ್ರಧಾನಿ ಕಚೇರಿಗೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಕಮಿಷನ್ ಆರೋಪ: ದಾಖಲೆ ಬಿಡುಗಡೆ ಮಾಡಿದರೆ ಸರ್ಕಾರ ಪತನ- ರಾಜ್ಯ ಗುತ್ತಿಗೆದಾರರ ಸಂಘ
ಈ ಬೆಳವಣಿಗೆಗಳ ಮಧ್ಯೆ ಮಾತನಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ನನಗೆ ಪ್ರಧಾನಿಯವರ ಕಚೇರಿಯಿಂದ ಕರೆ ಬಂದಿಲ್ಲ. ಯಾವುದೇ ನೊಟೀಸ್ ಕೂಡ ಬಂದಿಲ್ಲ. ನಾನು ಕೆಲಸದ ಮೇಲೆ ಮೈಸೂರಿಗೆ ಬಂದಿದ್ದೆ. ನನ್ನ ಆಫೀಸಿಗೆ ಒಬ್ಬರು ಆಗಮಿಸಿದ್ದರಂತೆ. ಅವರು ಕೆಲವು ದಾಖಲೆಗಳನ್ನ ಕೇಳಿದ್ದಾರೆ. ಬಳಿಕ ಆಫೀಸಿನಿಂದ ನನಗೆ ಕರೆ ಮಾಡಿ ತಿಳಿಸಿದ್ದಾರೆ ಎಂದು ಹೇಳಿದರು.
ಯಾರೋ ನಿಮ್ಮನ್ನ ಕೇಳಿಕೊಂಡು ಬಂದಿದ್ದಾರೆ. ನಿಮ್ಮ ಜೊತೆ ಮಾತನಾಡಬೇಕೆಂದು ಕೇಳ್ತಿದ್ದಾರೆ ಎಂದು ಕಚೇರಿ ಸಿಬ್ಬಂದಿ ತಿಳಿಸಿದರು. ನಾನು ಅವರನ್ನ ಯಾರೆಂದು ವಿಚಾರಿಸಿದೆ ಎಂದು ಹೇಳಿದ ಕೆಂಪಣ್ಣ, ಹೋಂ ಡಿಪಾರ್ಟಮೆಂಟ್ ನಿಂದ ಬಂದಿದ್ದೇವೆ ಎಂದ್ರು. ನಿಮ್ಮನ್ನ ಭೇಟಿಯಾಗಬೇಕು ಎಂದರು. ನಾನು ಇಂದು ಸಿಗ್ತೇನೆ ಎಲ್ಲಿಗೆ ಬರಬೇಕೆಂದು ಕೇಳಿದ್ದೇನೆ. ಅವರು ಹೇಳಿದ ಜಾಗಕ್ಕೆ ನಾವು ಹೋಗ್ತೇವೆ. ನಮ್ಮ ಕಾರ್ಯದರ್ಶಿ ಕರೆದುಕೊಂಡು ಹೋಗ್ತೇನೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ತಿಳಿಸಿದರು.
For more news update stay with actp news
Android App
Facebook
Twitter
Dailyhunt
Share Chat
Telegram
Koo App