The New Indian Express
ಬೆಂಗಳೂರು: ಮುಂದಿನ 40 ವರ್ಷಗಳ ಕಾಲ ಬೆಂಗಳೂರಿನ ಅಭಿವೃದ್ಧಿಗೆ ಸಮಗ್ರ ಯೋಜನೆಯನ್ನು ತಮ್ಮ ಸರ್ಕಾರ ಶೀಘ್ರದಲ್ಲೇ ಹೊರತರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.
ಸೋಮವಾರ ಇಲ್ಲಿ ನಡೆದ ಕೆಂಪೇಗೌಡ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಬೊಮ್ಮಾಯಿ, ಹಿಂದಿನ ಸರ್ಕಾರಗಳು ಕೈಗೊಂಡ ಬೆಂಗಳೂರು ಅಭಿವೃದ್ಧಿ ಕಾಮಗಾರಿಗಳನ್ನು ಗಂಭೀರವಾಗಿ ಪರಿಶೀಲಿಸುವ ಸಮಯ ಬಂದಿದೆ. ಬೆಂಗಳೂರು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ ಮತ್ತು ಪ್ರತಿದಿನ 5,000 ಕ್ಕೂ ಹೆಚ್ಚು ಹೊಸ ವಾಹನಗಳು ನಗರದ ರಸ್ತೆಗಳಿಗೆ ಸೇರ್ಪಡೆಯಾಗುತ್ತವೆ. ನಗರದ ಹೊರವಲಯದಲ್ಲಿರುವ ಉಪ ನಗರಗಳ ಅಭಿವೃದ್ಧಿಯೊಂದಿಗೆ ಉತ್ತಮ ರಸ್ತೆಗಳು ಮತ್ತು ಸಾರಿಗೆ ಸೌಲಭ್ಯಗಳನ್ನು ಒದಗಿಸುವ ಮೂಲಕ ಬೆಂಗಳೂರಿನ ಜನದಟ್ಟಣೆಯನ್ನು ಕಡಿಮೆ ಮಾಡುವುದು ಈಗ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದರು.
ಇದನ್ನೂ ಓದಿ: 4 ಮೇಲ್ಸೇತುವೆ ನಿರ್ಮಿಸಲು ಬಿಬಿಎಂಪಿ ಸಜ್ಜು: ಅಂದಾಜು 230 ಕೋಟಿ ರೂ., 18 ತಿಂಗಳ ಗಡುವು!
ಹೂಡಿಕೆದಾರರಿಗೆ ಉತ್ತಮ ಸೌಲಭ್ಯ ಕಲ್ಪಿಸಬೇಕು
ಬೆಂಗಳೂರಿನಲ್ಲಿ 1.3 ಕೋಟಿ ಜನಸಂಖ್ಯೆ ಇದ್ದು, ಅತಿ ಹೆಚ್ಚು ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಗರವು ಅಡ್ಡಲಾಗಿ ಬೆಳೆಯುತ್ತಿದೆ ಮತ್ತು ವಿಧಾನಸೌಧದಿಂದ 40 ಕಿಮೀ ದೂರದ ಸ್ಥಳಗಳು ಸಹ ಬೆಂಗಳೂರಿನ ಭಾಗವಾಗಿದೆ. ದೂರವನ್ನು ಲೆಕ್ಕಿಸದೆ, ಈ ಸ್ಥಳಗಳಿಗೆ ಕುಡಿಯುವ ನೀರು ಸರಬರಾಜು, ಒಳಚರಂಡಿ ಸೌಲಭ್ಯ ಮತ್ತು ರಸ್ತೆ ಸಂಪರ್ಕ ಕಲ್ಪಿಸುವ ಅವಶ್ಯಕತೆಯಿದೆ. ಬೆಂಗಳೂರು ನಗರವು ಅದರ ಸಮತಲ ಬೆಳವಣಿಗೆಯಿಂದಾಗಿ ರಾಮನಗರ ಮತ್ತು ತುಮಕೂರು ಜಿಲ್ಲೆಗಳೊಂದಿಗೆ ಸಂಪರ್ಕ ಹೊಂದಿದೆ ಎಂದು ಹೇಳಿದರು.
ಇದನ್ನೂ ಓದಿ: ಬೆಂಗಳೂರನ್ನು ನಾಲ್ಕೂ ದಿಕ್ಕುಗಳಿಂದ ಅಭಿವೃದ್ಧಿ ಮಾಡುವ ಉದ್ದೇಶ ಇದೆ: ಸಿಎಂ ಬೊಮ್ಮಾಯಿ
ಬೆಂಗಳೂರು ಜ್ಞಾನ ನಗರಿಯಾಗಿದ್ದು, ಪ್ರಪಂಚದ ವಿವಿಧ ಭಾಗಗಳ ಜನರನ್ನು ಸೆಳೆಯುತ್ತದೆ. ಕಳೆದ 60 ವರ್ಷಗಳಿಂದ, ಇದು IT/BT ಕಂಪನಿಗಳು ಮತ್ತು ಸಂಶೋಧನೆ ಮತ್ತು ಅಭಿವೃದ್ಧಿ (R&D) ಕೇಂದ್ರಗಳಲ್ಲದೆ ಅನೇಕ ಸಾರ್ವಜನಿಕ ವಲಯದ ಘಟಕಗಳಿಗೆ ನೆಲೆಯಾಗಿರುವ ಕಾರಣ ಜನರನ್ನು ಆಕರ್ಷಿಸುತ್ತಿದೆ. ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಹೂಡಿಕೆ ಬರುತ್ತಿದ್ದು, ಹೂಡಿಕೆದಾರರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಅಗತ್ಯವಿದೆ ಎಂದರು.
For more news update stay with actp news
Android App
Facebook
Twitter
Dailyhunt
Share Chat
Telegram
Koo App