The New Indian Express
ಬೆಳಗಾವಿ: ಬೆಳಗಾವಿ ಸಮೀಪದ ಮೂಡಲಗಿಯ ಸೇತುವೆ ಬಳಿಯ ತೆರೆದ ಚರಂಡಿಯಲ್ಲಿ ಐದು ಚಿಕ್ಕ ಡಬ್ಬಿಗಳಲ್ಲಿ ಏಳು ಭ್ರೂಣಗಳು ಶುಕ್ರವಾರ ತೇಲಿ ಬಂದಿದ್ದು, ಇದನ್ನು ಕಂಡ ಜನರು ಬೆಚ್ಚಿ ಬಿದ್ದಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್ಒ) ಡಾ.ಮಹೇಶ ಕೋಣೆ ಅವರು ಮಾತನಾಡಿ, ಭ್ರೂಣಗಳು ಸುಮಾರು ಐದರಿಂದ ಏಳು ತಿಂಗಳ ವಯಸ್ಸಿನವು. ಪತ್ತೆಯಾದ ಭ್ರೂಣಗಳನ್ನು ಬೆಳಗಾವಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದೆ, ಪ್ರಕರಣ ಸಂಬಂಧ ತನಿಖೆಯನ್ನು ತೀವ್ರಗೊಳಿಸಲಾಗಿದ್ದು, ಸಮಿತಿಯನ್ನು ರಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: 50 ವರ್ಷಗಳಿಂದ ಜಾರಿಯಲ್ಲಿದ್ದ ಗರ್ಭಪಾತದ ಹಕ್ಕು ರದ್ದುಗೊಳಿಸಿದ ಅಮೆರಿಕಾ ಸುಪ್ರೀಂ ಕೋರ್ಟ್!
ಕೆಎಂಎಫ್ ಅಧ್ಯಕ್ಷ ಹಾಗೂ ಸ್ಥಳೀಯ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮಾತನಾಡಿ, ಘಟನೆಯು ಸಮಾಜವನ್ನು ನಾಚಿಕೆಯಿಂದ ತಲೆ ತಗ್ಗಿಸುವಂತೆ ಮಾಡುವ ಅನಾಗರಿಕ ಘಟನೆ ಎಂದು ಬಣ್ಣಿಸಿದ್ದಾರೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಈಗಾಗಲೇ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಭ್ರೂಣಗಳ ಲಿಂಗವನ್ನು ಆರೋಗ್ಯ ಇಲಾಖೆ ಇನ್ನೂ ಬಹಿರಂಗಪಡಿಸದಿದ್ದರೂ, ಇದು ಹೆಣ್ಣು ಭ್ರೂಣ ಹತ್ಯೆಯ ಪ್ರಕರಣ ಎಂದು ಶಂಕಿಸಲಾಗಿದೆ. ಮೂಡಲಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App