English Tamil Hindi Telugu Kannada Malayalam Android App
Wed. Nov 30th, 2022

Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1249 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,68,365ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40075ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನು ಓದಿ: ಖಾಸಗಿ ಆಸ್ಪತ್ರೆಗಳ 779 ಕೋಟಿ ರೂ. ಮೊತ್ತದ ಕೋವಿಡ್ ಬಿಲ್‌ ಗಳ ಪಾವತಿ ಮಾಡಿದ ರಾಜ್ಯ ಸರ್ಕಾರ!

ಬೆಂಗಳೂರಿನಲ್ಲಿ ಇಂದು 1109 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,03,107ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1154 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,22,541ಕ್ಕೆ ಏರಿಕೆಯಾಗಿದೆ. ಇನ್ನು 5707 ಸಕ್ರಿಯ ಪ್ರಕರಣಗಳಿವೆ.

Source link

For more news update stay with actp news

Android App

Facebook

Twitter

Dailyhunt

Share Chat

Telegram

Koo App

Leave a Reply

Your email address will not be published. Required fields are marked *