Online Desk
ಬೆಂಗಳೂರು: ರಾಜ್ಯದಲ್ಲಿ ಸುಮಾರು ಎರಡು ಸಾವಿರ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆ ಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ತಿಳಿಸಿದ್ದಾರೆ.
ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ನಿರ್ಮಿಸಿರುವ ಜಯನಗರ ಅಗ್ನಶಾಮಕ ಠಾಣೆ ನೂತನ ಕಟ್ಟಡವನ್ನು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ಉದ್ಘಾಟಿಸಿ, ಮಾತನಾಡಿದ ಸಚಿವರು, ಜನತೆಯ ಪ್ರಾಣ ಹಾಗೂ ಆಸ್ತಿ ರಕ್ಷಣೆಗೆ, ರಾಜ್ಯ ಸರಕಾರ ಎಲ್ಲಾ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುತ್ತದೆ, ಎಂದರು.
ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಸರಕಾರ ವಿಶೇಷ ಆದ್ಯತೆ, ನೀಡುತ್ತದೆ, ಹಾಗೂ ಹೆಚ್ಚಿನ ಅನುದಾನ ಒದಗಿಸಲಾಗುತ್ತದೆ, ಎಂದೂ ಸಚಿವರು ತಿಳಿಸಿದರು.
ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಮಹಾ ನಿರ್ದೇಶಕರು, ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಶ್ರೀ ಅಮರ್ ಕುಮಾರ್ ಪಾಂಡೆ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
For more news update stay with actp news
Android App
Facebook
Twitter
Dailyhunt
Share Chat
Telegram
Koo App