Online Desk
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.
Justice Alok Aradhe, senior-most Judge of the #Karnataka High Court, has been appointed to perform the duties of the office of the Chief Justice of the HC wef 03.07.2022 consequent upon the retirement of Chief Justice Ritu Raj Awasthi@XpressBengaluru @BoskyKhanna
— Yathiraju_TNIE/ಯತಿರಾಜು (@rajaarushi) June 30, 2022
ಜುಲೈ 2 ರಂದು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಗುರುವಾರ ನೇಮಕ ಮಾಡಲಾಗಿದೆ.
My best wishes to Justice Alok Aradhe! pic.twitter.com/hBQuEGTXDJ
— Kiren Rijiju (@KirenRijiju) June 30, 2022
ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಆರಾಧೆ ಅವರನ್ನು ನೇಮಿಸಿರುವ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ.
ನ್ಯಾಯಮೂರ್ತಿ ಆರಾಧೆ ಅವರು ಕರ್ನಾಟಕ ಹೈಕೋರ್ಟ್ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದು, ಜುಲೈ 3ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ನ್ಯಾಯಮೂರ್ತಿ ಅವಸ್ಥಿ ಅವರು ಜುಲೈ 2ರಂದು ತಮ್ಮ 62ನೇ ಹುಟ್ಟುಹಬ್ಬಕ್ಕೂ ಮುನ್ನಾದಿನದಂದು ನಿವೃತ್ತರಾಗಲಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಮರ್ತಿಗಳು 65ನೇ ವರ್ಷ ವಯಸ್ಸಿಗೆ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳು 62ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App