Online Desk
ಕರಾಚಿ: ಪಾಕಿಸ್ತಾನದ ಕರಾಚಿಯ ಒರಂಗಿ ಪ್ರದೇಶದಲ್ಲಿ ಬುಧವಾರ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಲಾಗಿದೆ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪೂಜಾ ಸ್ಥಳಗಳ ಮೇಲೆ ಇತ್ತೀಚಿನ ದಿನಗಳಲ್ಲಿ ದಾಳಿಗಳು ಹೆಚ್ಚಾಗುತ್ತಿವೆ.
ಕರಾಚಿಯ ಕೋರಂಗಿ ಪ್ರದೇಶದಲ್ಲಿರುವ ಮಾರಿ ಮಾತಾ ಮಂದಿರದಲ್ಲಿರುವ ದೇವರ ವಿಗ್ರಹಗಳ ಮೇಲೆ ದಾಳಿ ನಡೆಸಲಾಗಿದೆ. ಈ ದೇವಾಲಯವು ಕೋರಂಗಿ ಪೊಲೀಸ್ ಠಾಣಾ ವ್ಯಾಪ್ತಿಯ “ಜೆ” ಪ್ರದೇಶದಲ್ಲಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ದೇವಸ್ಥಾನವನ್ನು ಪರಿಶೀಲನೆ ನಡೆಸಿ ಘಟನೆಯ ಬಗ್ಗೆ ವಿಚಾರಿಸಿದ್ದಾರೆ.
ಈ ಘಟನೆಯು ಪಾಕಿಸ್ತಾನದ ಕರಾಚಿಯಲ್ಲಿ ವಾಸಿಸುವ ಹಿಂದೂ ಸಮುದಾಯದಲ್ಲಿ ಭಯವನ್ನು ಉಂಟುಮಾಡಿದೆ. ಈ ದಾಳಿಯ ಬಳಿಕ ಕೋರಂಗಿ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆಯನ್ನು ತಪ್ಪಿಸಲು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಎಕ್ಸ್ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.
ಆರರಿಂದ ಎಂಟು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಈ ಪ್ರದೇಶಕ್ಕೆ ಬಂದು ದೇವಾಲಯದ ಮೇಲೆ ದಾಳಿ ಮಾಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ ಜನಸಂಖ್ಯೆಗೆ ಸೇರಿದ ದೇವಾಲಯಗಳು ಗುಂಪು ಹಿಂಸಾಚಾರಕ್ಕೆ ಗುರಿಯಾಗುವುದು ಸಾಮಾನ್ಯವಾಗಿದೆ.
ಘಟನೆಯ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು. ಘಟನೆಯ ಕುರಿತು ಕೊಟ್ರಿ ಪೊಲೀಸ್ ಠಾಣೆಯಲ್ಲಿ ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಧ್ಯರಾತ್ರಿಯ ನಂತರ ಅಪರಿಚಿತ ವ್ಯಕ್ತಿಗಳು ದೇವಾಲಯದ ಆವರಣಕ್ಕೆ ನುಗ್ಗಿ ಅವರ ದೇವರ ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಭಾರತದಲ್ಲಿ ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಈ ಕೃತ್ಯ ಎಸಗಲಾಗಿದೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನು ಬಂಧಿಸಿಲ್ಲ.
For more news update stay with actp news
Android App
Facebook
Twitter
Dailyhunt
Share Chat
Telegram
Koo App