The New Indian Express
ನವದೆಹಲಿ: ಪ್ರವಾದಿ ಮೊಹಮ್ಮದ್ ಕುರಿತ ಬಿಜೆಪಿ ನಾಯಕಿ ನೂಪುರ್ ಶರ್ಮಾ ನೀಡಿರುವ ಹೇಳಿಕೆ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಈಗಾಗಲೇ ಈ ಹೇಳಿಕೆಯನ್ನು ಖಂಡಿಸಿರುವ ಮುಸ್ಲಿಮ್ ರಾಷ್ಟ್ರಗಳ ಸಾಲಿಗೆ ಇಂಡೋನೇಷ್ಯಾ, ಸೌದಿ ಅರೇಬಿಯಾ, ಯುಎಇ, ಜೋರ್ಡಾನ್, ಬಹ್ರೈನ್ ಅಫ್ಘಾನಿಸ್ತಾನ ಸೇರ್ಪಡೆಗೊಂಡಿವೆ.
ಎಲ್ಲಾ ಧಾರ್ಮಿಕ ನಂಬಿಕೆಗಳನ್ನೂ ಗೌರವಿಸುವ ಮಹತ್ವವನ್ನು ಇಂಡೋನೇಷ್ಯಾ, ಸೌದಿ ಅರೇಬಿಯಾ, ಯುಎಇ, ಜೋರ್ಡಾನ್, ಬಹ್ರೈನ್ ಅಫ್ಘಾನಿಸ್ತಾನ ಒತ್ತಿ ಹೇಳಿವೆ.
ಹೇಳಿಕೆ ಬಿಡುಗಡೆ ಮಾಡಿರುವ ಸೌದಿ ಅರೇಬಿಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಬಿಜೆಪಿ ವಕ್ತಾರರು ನೀಡಿರುವ ಹೇಳಿಕೆಯನ್ನು ಖಂಡಿಸಿದ್ದು, ಪ್ರವಾದಿ ಮೊಹಮದ್ ಗೆ ಮಾಡಿರುವ ಅವಮಾನ ಎಂದು ಹೇಳಿದೆ.
ಇಸ್ಲಾಮ್ ಧರ್ಮದ ಗುರುತಿನ ವಿರುದ್ಧ ಪೂರ್ವಾಗ್ರಹವನ್ನು ಶಾಶ್ವತವಾಗಿ ತಿರಸ್ಕರಿಸುವುದಾಗಿ ಸೌದಿ ಅರೇಬಿಯಾದ ಸಚಿವಾಲಯ ತಿಳಿಸಿದ್ದು, ಬಿಜೆಪಿ ವಕ್ತಾರೆಯನ್ನು ಅಮಾನತುಗೊಳಿಸಿರುವುದನ್ನು ಸ್ವಾಗತಿಸಿದೆ.
ಇದನ್ನೂ ಓದಿ: ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಹಸನ; “ಚೀನಾವನ್ನೇಕೆ ಯಾರೂ ಪ್ರಶ್ನಿಸುತ್ತಿಲ್ಲ?”
ಇಂಡೋನೇಷ್ಯಾ ಸಹ ಹೇಳಿಕೆಯನ್ನು ಖಂಡಿಸಿದ್ದು, ಇಬ್ಬರು ಭಾರತೀಯ ರಾಜಕಾರಣಿಗಳು ಪ್ರವಾದಿ ಮೊಹಮ್ಮದ್ ಬಗ್ಗೆ ನೀಡಿರುವ ಸ್ವೀಕಾರಾರ್ಹವಲ್ಲ ಅವಹೇಳನಕಾರಿ ಹೇಳಿಕೆಗಳನ್ನು ಖಂಡಿಸುತ್ತೇವೆ. ಖಂಡಿಸಿರುವ ಸಂದೇಶವನ್ನು ಜಕಾರ್ತದಲ್ಲಿರುವ ಭಾರತೀಯ ರಾಯಭಾರಿಗೆ ತಲುಪಿಸಲಾಗಿದೆ ಎಂದು ಇಂಡೋನೇಷ್ಯಾದ ವಿದೇಶಾಂಗ ಸಚಿವಾಲಯ ಟ್ವೀಟ್ ಮೂಲಕ ತಿಳಿಸಿದೆ.
ಯುಎಇ ಸಹ ಹೇಳಿಕೆಯನ್ನು ಖಂಡಿಸಿರುವ ರಾಷ್ಟ್ರಗಳ ಸಾಲಿಗೆ ಸೇರಿದ್ದು, ಜೋರ್ಡಾನ್, ಓಮನ್ ಗಳೂ ಮುಸ್ಲಿಮ್ ರಾಷ್ಟ್ರಗಳ ಖಂಡನೆಗೆ ಧ್ವನಿಗೂಡಿಸಿವೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App