English Tamil Hindi Telugu Kannada Malayalam Android App
Fri. Dec 2nd, 2022

The New Indian Express

ನವದೆಹಲಿ: ಮಹಾರಾಷ್ಟ್ರ ರಾಜ್ಯದ ಹಿತಾಸಕ್ತಿಯಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಮನವಿ ಮೇರೆಗೆ ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಸೇರಲು ನಿರ್ಧರಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಸಂಜೆ ತಿಳಿಸಿದ್ದಾರೆ.

ಇಂದು ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಂದ್ರ ಫಡ್ನವೀಸ್, ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರಿಗೆ ಬಿಜೆಪಿ ನೈತಿಕ ಬೆಂಬಲ ನೀಡುವುದಾಗಿ ಹೇಳಿದ್ದರು.

ಇದನ್ನೂ ಓದಿ: ಶಿವಸೇನಾ ಬಂಡಾಯ ನಾಯಕ, ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಗ್ಗೆ ನಿಮಗೆಷ್ಟು ಗೊತ್ತು?

ಬಳಿಕ ನಡೆದ ಬೆಳವಣಿಗೆಯಲ್ಲಿ ಫಡ್ನವೀಸ್ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಘೋಷಿಸಿದರು.

Source link

For more news update stay with actp news

Android App

Facebook

Twitter

Dailyhunt

Share Chat

Telegram

Koo App

Leave a Reply

Your email address will not be published. Required fields are marked *