Online Desk
ಮುಂಬೈ: ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದ ಉದ್ಧವ್ ಠಾಕ್ರೆ ಅವರು ಬುಧವಾರ ರಾತ್ರಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ರಾತ್ರಿ ರಾಜಭವನಕ್ಕೆ ತೆರಳಿದ ಉದ್ಧವ್ ಠಾಕ್ರೆ ಅವರು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.
ಇದನ್ನು ಓದಿ: ಮಹಾ ರಾಜಕೀಯ ಬಿಕ್ಕಟ್ಟು: ವಿಶ್ವಾಸಮತಯಾಚನೆಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ರಾಜೀನಾಮೆಯನ್ನು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅಂಗೀಕರಿಸಿದ್ದಾರೆ. ಪರ್ಯಾಯ ವ್ಯವಸ್ಥೆ ಮಾಡುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ಅವರು ಕೇಳಿಕೊಂಡಿದ್ದಾರೆ ಎಂದು ರಾಜಭವನ ತಿಳಿಸಿದೆ.
ಇದನ್ನು ಓದಿ: ವಿಶ್ವಾಸಮತಯಾಚನೆಗೆ ತಡೆ ನೀಡಲು ಸುಪ್ರೀಂ ನಕಾರ, ಸಿಎಂ ಠಾಕ್ರೆ ನಾಳೆಯೇ ಬಹುಮತ ಸಾಬೀತಪಡಿಸಬೇಕು
ವಿಶ್ವಾಸಮತ ಯಾಚಿಸುವಂತೆ ಸೂಚನೆ ನೀಡಿರುವ ಮಹಾರಾಷ್ಟ್ರ ರಾಜ್ಯಪಾಲರ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಕೆಲವೇ ಕ್ಷಣಗಳಲ್ಲಿ ಫೇಸ್ಬುಕ್ ಲೈವ್ ಬಂದ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತು ವಿಧಾನ ಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.
For more news update stay with actp news
Android App
Facebook
Twitter
Dailyhunt
Share Chat
Telegram
Koo App