The New Indian Express
ಬೆಂಗಳೂರು: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡಿ, ಜೊತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಬೊಮ್ಮಾಯಿ ಅವರು, ‘ರಾಜ್ಯದ ಉದ್ದಕ್ಕೂ ಪರಿಸರ ರಕ್ಷಣೆಯ ಪ್ರಚಾರ ಮಾಡಲು ಈ ಸ್ಥಾನಮಾನ ನೀಡಲಾಗಿದೆ.
Padmashri awardee Saalumarada Thimmakka interacts with @CMofKarnataka @BSBommai during her 111th b’day celebrations in #Bengaluru@NewIndianXpress @XpressBengaluru @KannadaPrabha @Cloudnirad @Amitsen_TNIE @KumarPushkarifs @ifs_yedukondalu @ParveenKaswan @susantananda3 @wildmysuru pic.twitter.com/lJJP9wsdWC
— Bosky Khanna (@BoskyKhanna) June 30, 2022
ಹೊರ ರಾಜ್ಯಕ್ಕೆ ತೆರಳಿದರೆ ಸರ್ಕಾರದಿಂದಲೇ ಖರ್ಚು ಭರಿಸಲಾಗುವುದು. ವಾರ್ತಾ ಇಲಾಖೆಯಿಂದ ಸಾಲುಮರದ ತಿಮ್ಮಕ್ಕ ಅವರ ವೆಬ್ಸೀರಿಸ್ ಮಾಡಲಾಗುವುದು. ಅವರಿಗೆ ಬೇಲೂರು ತಾಲ್ಲೂಕಿನಲ್ಲಿ ಹತ್ತು ಎಕರೆ ಭೂಮಿ ಮಂಜೂರು ಮಾಡಲಾಗುವುದು. ಬೆಂಗಳೂರಿನಲ್ಲಿ ಬಿಡಿಎ ನಿವೇಶನ ನೀಡಲಾಗಿದೆ. ಆ ನಿವೇಶನದಲ್ಲಿ ಮನೆ ನಿರ್ಮಿಸಿ ಕೊಡಲಾಗುವುದು ಎಂದು ಹೇಳಿದರು.
ಬಳಿಕ ಬೇಲೂರು ಶಾಸಕ ಲಿಂಗೇಶ್ ಮಾತನಾಡಿ, ಸಾಲುಮರದ ತಿಮ್ಮಕ್ಕ ಅವರಿಗೆ ಲಭಿಸಿದ ಪ್ರಶಸ್ತಿಗಳು ಹಾಗೂ ಅವರ ಸಾಧನೆ ಬಿಂಬಿಸಲು ವಸ್ತು ಸಂಗ್ರಹಾಲಯ ನಿರ್ಮಿಸಲು ಅನುದಾನ ಹಾಗೂ ಅವರ ಗ್ರಾಮ ಬಳ್ಳೂರು ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ನೀಡುವಂತೆ ಮನವಿ ಮಾಡಿದರು.
“ಉದಯಪುರದಲ್ಲಿ ಸಂಭವಿಸಿರುವ ಘಟನೆ ಅತ್ಯಂತ ಅಮಾನವೀಯ, ಹೇಯ ಕೃತ್ಯ ಇದೊಂದು ಭಯೋತ್ಪಾದಕ ಕೃತ್ಯ ಮತ್ತು ಇದರ ಹಿಂದೆ ಒಂದು ಅಂತರಾಷ್ಟ್ರೀಯ ಷಡ್ಯಂತ್ರ ಇದೆ. ಇದರ ಸೂಕ್ತ ತನಿಖೆಯಾಗಬೇಕು ಮತ್ತು ಅಪರಾಧಿಗಳಿಗೆ ಗಲ್ಲುಶಿಕ್ಷೆ ಆಗಬೇಕು” ಮುಖ್ಯಮಂತ್ರಿ @BSBommai pic.twitter.com/W56n6Y9hJQ
— CM of Karnataka (@CMofKarnataka) June 30, 2022
ಉದಯಪುರ ಟೈಲರ್ ಹತ್ಯೆ ಖಂಡಿಸಿದ ಸಿಎಂ
ಇದೇ ವೇಳೆ ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಹತ್ಯೆಯನ್ನು ಖಂಡಿಸಿದ ಸಿಎಂ ಬೊಮ್ಮಾಯಿ, ‘”ಉದಯಪುರದಲ್ಲಿ ಸಂಭವಿಸಿರುವ ಘಟನೆ ಅತ್ಯಂತ ಅಮಾನವೀಯ, ಹೇಯ ಕೃತ್ಯ ಇದೊಂದು ಭಯೋತ್ಪಾದಕ ಕೃತ್ಯ ಮತ್ತು ಇದರ ಹಿಂದೆ ಒಂದು ಅಂತರಾಷ್ಟ್ರೀಯ ಷಡ್ಯಂತ್ರ ಇದೆ. ಇದರ ಸೂಕ್ತ ತನಿಖೆಯಾಗಬೇಕು ಮತ್ತು ಅಪರಾಧಿಗಳಿಗೆ ಗಲ್ಲುಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.
For more news update stay with actp news
Android App
Facebook
Twitter
Dailyhunt
Share Chat
Telegram
Koo App