ANI
ಮುಂಬೈ: ಶಿವಸೇನೆ ಅಧಿಕಾರಕ್ಕಾಗಿ ಹುಟ್ಟಿಲ್ಲ, ಅಧಿಕಾರ ಶಿವಸೇನೆಗಾಗಿ ಹುಟ್ಟಿದೆ. ಇದು ಯಾವಾಗಲೂ ಬಾಳಾಸಾಹೇಬ್ ಠಾಕ್ರೆಯವರ ಮಂತ್ರವಾಗಿತ್ತು. ಮತ್ತೊಮ್ಮೆ ಸ್ವಂತ ಬಲದಿಂದ ಕೆಲಸ ಮಾಡಿ ಅಧಿಕಾರಕ್ಕೆ ಬರುತ್ತೇವೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ.
ಉದ್ಧವ್ ಠಾಕ್ರೆ ರಾಜೀನಾಮೆಯೊಂದಿಗೆ ಮಹಾರಾಷ್ಟ್ರ ವಿಕಾಸ್ ಅಘಾಡಿ(MVA) ಸರ್ಕಾರ ಪತನವಾಗಿದೆ. ನಿನ್ನೆ ಸಂಜೆ ರಾಜ್ಯಪಾಲ ಭಗಂತ್ ಸಿಂಗ್ ಕೊಶ್ಯಾರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುವಾಗ ಭಾವುಕರಾಗಿದ್ದೆವು. ಮುಖ್ಯಮಂತ್ರಿಯಾಗಿ ಪ್ರತಿಯೊಬ್ಬರೂ ಉದ್ಧವ್ ಠಾಕ್ರೆ ಮೇಲೆ ನಂಬಿಕೆ ಇಟ್ಟುಕೊಂಡಿದ್ದರು. ರಾಜ್ಯದ ಪ್ರತಿ ಜಾತಿ, ಧರ್ಮದ ಜನರು ಅವರನ್ನು ಒಪ್ಪಿಕೊಂಡಿದ್ದರು. ಸೋನಿಯಾ ಗಾಂಧಿ ಮತ್ತು ಶರದ್ ಪವಾರ್ ಅವರು ಉದ್ಧವ್ ಠಾಕ್ರೆ ಮೇಲೆ ನಂಬಿಕೆ ಇಟ್ಟುಕೊಂಡಿದ್ದರು ಎಂದಿದ್ದಾರೆ.
ಇದನ್ನೂ ಓದಿ: ‘ಮಹಾ’ ರಾಜಕೀಯ: ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜಿನಾಮೆ; ವಿಶೇಷ ಅಧಿವೇಶನ ಮುಂದೂಡಿಕೆ; ವಿಶ್ವಾಸಮತ ಯಾಚನೆ ಇಲ್ಲ!
ಇನ್ನು ತಮಗೆ ಇಡಿ ಸಮನ್ಸ್ ಬಗ್ಗೆ ಪ್ರತಿಕ್ರಿಯಿಸಿದ ಸಂಜಯ್ ರಾವತ್, ನಾಳೆ ಜಾರಿ ನಿರ್ದೇಶನಾಲಯ ಕಚೇರಿಗೆ ಹೋಗುತ್ತೇನೆ ಎಂದಿದ್ದಾರೆ. ಪತ್ರ ಚೌಲ್ ಭೂ ಹಗರಣ ಕೇಸಿಗೆ ಸಂಬಂಧಪಟ್ಟಂತೆ ಜುಲೈ 1ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಂಜಯ್ ರಾವತ್ ಗೆ ಜಾರಿ ನಿರ್ದೇಶನಾಲಯ ಎರಡು ಬಾರಿ ಸಮನ್ಸ್ ಜಾರಿ ಮಾಡಿದೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App