Online Desk
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಭೂಕಂಪನ ಸಂಭವಿಸಿದ್ದು, ವಾರದ ಅವಧಿಯಲ್ಲಿ ಇದು ನಾಲ್ಕನೇ ಕಂಪನವಾಗಿದೆ.
ಇದನ್ನೂ ಓದಿ: ಕೊಡಗಿನಲ್ಲಿ ಲಘು ಭೂಕಂಪನ; ಒಂದು ವಾರದಲ್ಲಿ 3ನೇ ಬಾರಿ ಭೂಮಿ ನಡುಗಿದ ಅನುಭವ
ಕೊಡಗಿನ ಕೆಲವೆಡೆ ಶುಕ್ರವಾರ ನಸುಕಿನಲ್ಲಿ ಸಂಭವಿಸಿದ ಭೂಕಂಪನದ ಕೇಂದ್ರ ಬಿಂದು ಮಡಿಕೇರಿ ತಾಲ್ಲೂಕಿನಲ್ಲಿ ಪತ್ತೆಯಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 1.8 ರಷ್ಟು ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ ದೃಢಪಡಿಸಿದೆ.
#Earthquake of Magnitude 1.8 bordering Kodagu-Dakshina Kannada district recorded on July 1 at 1.15 am.@DeccanChronicle
— Gururaj A Paniyadi (@paniyadi) July 1, 2022
ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದಿಂದ ವಾಯುವ್ಯ ದಿಕ್ಕಿನಲ್ಲಿ 5.2 ಕಿ.ಮೀ ದೂರದಲ್ಲಿ ಭೂಮಿಯ 10 ಕಿ.ಮೀ. ಆಳದಲ್ಲಿ ನಸುಕಿನ 1.15ರಲ್ಲಿ ಭೂಕಂಪ ಸಂಭವಿಸಿದೆ. ಇದರಿಂದ ಕೆಲವು ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ ಅನುಭವ ಸುಮಾರು 30 ಕಿ.ಮೀ ವ್ಯಾಪ್ತಿಯಲ್ಲಿರುವ ಜನರಿಗೆ ಉಂಟಾಗಿದೆ. ಯಾವುದೇ ಹಾನಿಯಾಗಿಲ್ಲ ಎಂದು ಕೇಂದ್ರದ ಪ್ರಕಟಣೆ ತಿಳಿಸಿದೆ.
4th earthquake reported around the ecologically sensitive Kodagu Dakshina Kannada belt in abt a week’s time. With monsoon kicking in these quakes are not a good sign around the western ghats. This was a low intensity one measuring 1.8 on the Richter scale, epicenter in Madikeri. pic.twitter.com/mvjqecKJBA
— Deepak Bopanna (@dpkBopanna) July 1, 2022
ಭೂಮಿಯಲ್ಲಿ ಬಿರುಕುಗಳು ಕಂಡು ಬಂದ ಕೂಡಲೇ 08272-221077, 221099 ಕ್ಕೆ ಕರೆ ಮಾಡಿ ಮಾಹಿತಿ ನೀಡಿ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ಮನವಿ ಮಾಡಿದೆ. ಭೂಮಿ ಕಂಪಿಸುವುದರೊಂದಿಗೆ ಭಾರಿ ಪ್ರಮಾಣದ ವಿಚಿತ್ರವಾದ ಶಬ್ದ ಭೂಮಿ ಕೇಳಿ ಬಂದಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಇದನ್ನೂ ಓದಿ: ಸುಳ್ಯ, ಕೊಡಗಿನ ಕೆಲವೆಡೆ ಭೂಕಂಪನದ ಅನುಭವ
2018ರಲ್ಲೂ ಭೂಕಂಪ ಸಂಭವಿಸಿದ ಬಳಿಕ ಸುರಿದ ಭಾರಿ ಮಳೆಯಲ್ಲಿ ಭೂಕುಸಿತಗಳು ಸಂಭವಿಸಿದ್ದವು. ಪದೇ ಪದೇ ಈ ಭಾಗದಲ್ಲಿ ಭೂಕಂಪ ಆಗುತ್ತಿರುವುದರಿಂದ ಜನರು ಆತಂಕಗೊಂಡಿದ್ದಾರೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App