The New Indian Express
ಡಾಲಿ ಧನಂಜಯ್ ಅಭಿನಯದ ಹೆಡ್ ಬುಷ್ ಚಿತ್ರ ಅಕ್ಟೋಬರ್ 21 ರಂದು ಬಿಡುಗಡೆಯಾಗಲಿದೆ.
ಬೆಂಗಳೂರಿನ ಒಂದು ಕಾಲದ ಭೂಗತ ದೊರೆ ಡಾನ್ ಎಂ.ಪಿ ಜಯರಾಜ್ ಅವರ ಜೀವನಾಧಾರಿತ ಚಿತ್ರ ಇದಾಗಿದ್ದು, ಸಿನಿಮಾವನ್ನು ಅಕ್ಟೋಬರ್ 21ರ ದೀಪಾವಳಿ ಹಬ್ಬದಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.
ಪಾಯಲ್ ರಜಪೂತ್ ಸ್ಯಾಂಡಲ್ವುಡ್”ಗೆ ಪಾದಾರ್ಪಣೆ ಮಾಡುತ್ತಿರುವ ಮೊದಲ ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡುತ್ತಿದ್ದು, ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್, ಲೂಸ್ ಮಾದ ಖ್ಯಾತಿಯ ಯೋಗಿ, ರಘು ಮುಖರ್ಜಿ, ವಸಿಷ್ಟ ಎನ್ ಸಿಂಹ, ಮತ್ತು ಬಾಲು ನಾಗೇಂದ್ರ ನಟಿಸಿದ್ದಾರೆ.
ಡಾಲಿ ಪಿಕ್ಚರ್ಸ್ ಹಾಗೂ ಸೋಮಣ್ಣ ಟಾಕೀಸ್ ಮೂಲಕ ಚಿತ್ರ ನಿರ್ಮಾಣವಾಗಿದ್ದು, ಕೆಆರ್’ಡಿ ಸ್ಟುಡಿಯೋಸ್ ಚಿತ್ರ ವಿತರಣೆ ಮಾಡಲಿದೆ.
ಇದನ್ನೂ ಓದಿ: ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾ ಶೂಟಿಂಗ್ ಕಂಪ್ಲೀಟ್!
ಈ ನಡುವೆ ಧನಂಜಯ್ ಅಭಿಯನಯದ ಹಲವು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿ ನಿಂತಿವೆ. ಡಾಲಿ ಧನಂಜಯ್ ಅವರನ್ನು ಮುಂದೆ ಶಿವರಾಜ್ ಕುಮಾರ್ ಅಭಿನಯದ ಭೈರಾಗಿ ಚಿತ್ರದಲ್ಲಿ ನೋಡಬಹುದಾಗಿದೆ. ಈ ಚಿತ್ರ ಜುಲೈ.1 ಬಿಡುಗಡೆಯಾಗಲಿದೆ. ಇದಷ್ಟೇ ಅಲ್ಲಗೆ, ಆಗಸ್ಟ್ 12 ಮತ್ತು ಸೆಪ್ಟೆಂಬರ್ 9 ರಂದು ಬಿಡುಗಡೆಯಾಗಲಿರುವ ಮಾನ್ಸೂನ್ ರಾಗ ಹಾಗೂ ಜಮಾಲಿಗುಡ್ಡದಲ್ಲಿಯೂ ಧನಂಜಯ್ ನಟಿಸಿದ್ದಾರೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App