The New Indian Express
ಮಂಗಳೂರು: ಕರಾವಳಿ ಭಾಗದಲ್ಲಿ ಶುಕ್ರವಾರ ಕೂಡ ಮಳೆ ಮುಂದುವರಿದಿದ್ದು, ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಇಂದು ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಮುಂದುವರಿದ ಹಿನ್ನಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಎರಡು-ಮೂರು ದಿನ ಆರೆಂಜ್ ಅಲರ್ಟ್ ಇದ್ದು, ಮಂಗಳೂರು ನಗರ ಸೇರಿದಂತೆ ನಾನಾ ಕಡೆ, ತಗ್ಗು ಪ್ರದೇಶಗಳು ಜಲಾವೃತವಾಗಿದೆ.
ಉಡುಪಿ ಜಿಲ್ಲೆಯಲ್ಲಿ ಇಂದು ಕೂಡ ಮಳೆ ಮುಂದುವರಿದಿದ್ದು ಆದರೆ ತೀವ್ರತೆ ನಿನ್ನೆಯಿಂದ ಕೊಂಚ ಇಳಿಕೆಯಾಗಿದೆ. ನಿನ್ನೆಯಷ್ಟು ಮೋಡ ಮುಸುಕಿದ ವಾತಾವರಣವಿಲ್ಲ. ಸುರಕ್ಷತೆಯ ನಿಟ್ಟಿನಲ್ಲು ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿಯೂ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ: ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ, ಉಡುಪಿಯಲ್ಲೂ ಧಾರಾಕಾರ ವರ್ಷಧಾರೆ
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಹ ಮಳೆ ಮುಂದುವರಿದಿದೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App