ANI
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಸ್ವಲ್ಪ ಇಳಿಕೆಯಾಗಿದ್ದು, ದೇಶದಲ್ಲಿ ಶುಕ್ರವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 17,070 ಹೊಸ ಕೇಸುಗಳು ದಾಖಲಾಗಿವೆ. ನಿನ್ನೆ 18,819 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 39 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 23 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,07,189ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 14,413 ಮಂದಿ ಈವರೆಗೆ 4,28,36,906 ಮಂದಿ ಗುಣಮುಖರಾಗಿದ್ದಾರೆ.
ಇದುವರೆಗೆ ಕೋವಿಡ್ ನಿಂದ 4 ಕೋಟಿಯ 28 ಲಕ್ಷದ 36 ಸಾವಿರದ 906 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 5,02,150 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈವರೆಗೂ 86.28 ಕೋಟಿ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 197.74 ಕೋಟಿ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App