English Tamil Hindi Telugu Kannada Malayalam Google news Android App
Tue. Jan 31st, 2023

Online Desk

ಮುಂಬೈ: ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ ಮತ್ತು ದೇವೇಂದ್ರ ಪಢ್ನವಿಸ್ ಅವರಿಗೆ ನಿರ್ಗಮಿತ ಮುಖ್ಯಮಂತ್ರಿ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.

“ಹೊಸದಾಗಿ ನೇಮಕಗೊಂಡ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಶುಭಾಶಯಗಳು. ನೀವು ಮಹಾರಾಷ್ಟ್ರಕ್ಕೆ ಒಳ್ಳೆಯ ಕೆಲಸ ಮಾಡಬೇಕೆಂದು ನಾನು ಬಯಸುತ್ತೇನೆ” ಎಂದು ಉದ್ಧವ್ ಠಾಕ್ರೆ ಅವರು ಟ್ವೀಟ್ ಮಾಡಿದ್ದಾರೆ.

ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ಇಂದು ಮಹಾರಾಷ್ಟ್ರದ 20ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಹತ್ತು ದಿನಗಳ ರಾಜಕೀಯ ಬಿಕ್ಕಟ್ಟಿಗೆ ನಾಟಕೀಯ ತೆರೆ ಬಿದ್ದಿದೆ.

ಇದನ್ನು ಓದಿಜುಲೈ 2, 3 ರಂದು ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನ

ರಾಜಭವನದಲ್ಲಿ ಇಂದು 7.30ಕ್ಕೆ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ನೂತನ ಸಿಎಂ ಮತ್ತು ಡಿಸಿಎಂಗೆ ಪ್ರಮಾಣವಚನ ಬೋಧಿಸಿದರು. ಮರಾಠಿ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ, ಬಾಳಾಸಾಹೇಬ್ ಠಾಕ್ರೆ ಅವರನ್ನು ಸ್ಮರಿಸಿಕೊಂಡರು. ಮಹಾರಾಷ್ಟ್ರದ ಜನತೆ ಮತ್ತು ಶಿವಸೇನೆಯ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದರು.

Source link

For more news update stay with actp news

Android App

Facebook

Twitter

Dailyhunt

Share Chat

Telegram

Koo App

Leave a Reply

Your email address will not be published. Required fields are marked *