PTI
ತಿರುವನಂತಪುರ: ಸಿಪಿಐ(ಎಂ) ಪ್ರಧಾನ ಕಚೇರಿ ಮೇಲೆ ಗುರುವಾರ ರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಸ್ಫೋಟಕ ಎಸೆದಿದ್ದು, ಕೇರಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ರಾತ್ರಿ 11.30ರ ಸುಮಾರಿಗೆ ಬೈಕಿನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ ನಗರದ ಹೃದಯಭಾಗದಲ್ಲಿರುವ ಎಕೆಜಿ ಸೆಂಟರ್ ಮೇಲೆ ಸ್ಫೋಟಕ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಸಿಪಿಐ(ಎಂ) ಮುಖಂಡರು ಇದೊಂದು ಬಾಂಬ್ ದಾಳಿ ಎಂದು ಆರೋಪಿಸಿದ್ದಾರೆ. ಎಕೆಜಿ ಸೆಂಟರ್ನಲ್ಲಿ ತಂಗಿದ್ದ ಕೆಲ ಸಿಪಿಐ(ಎಂ) ಮುಖಂಡರು ಕಟ್ಟಡದ ಹೊರಗೆ ಭಾರೀ ಸ್ಫೋಟದ ಶಬ್ಧ ಕೇಳಿದ್ದಾಗಿ ಹೇಳಿದ್ದಾರೆ.
ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಘಟನಾ ಸ್ಥಳ ಮತ್ತು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಸಹ ತಪಾಸಣೆ ನಡೆಸಿದೆ.
ಎಕೆಜಿ ಸೆಂಟರ್ನ ಅಧಿಕೃತ ಮಾಧ್ಯಮ ಗುಂಪಿನ ಮೂಲಕ ಸಿಪಿಐ(ಎಂ) ಬಿಡುಗಡೆ ಮಾಡಿದ ಸಿಸಿಟಿವಿ ದೃಶ್ಯಗಳಲ್ಲಿ, ವ್ಯಕ್ತಿಯೊಬ್ಬ ಮೋಟಾರ್ ಬೈಕ್ನಲ್ಲಿ ಸ್ಥಳಕ್ಕೆ ಆಗಮಿಸಿ ಕಟ್ಟಡದ ಮೇಲೆ ಸ್ಫೋಟಕ ಎಸೆದು ಸ್ಥಳದಿಂದ ಪರಾರಿಯಾಗುತ್ತಿರುವುದು ಕಂಡುಬಂದಿದೆ. ಸ್ಫೋಟಕ ಎಕೆಜಿ ಕೇಂದ್ರದ ಕಲ್ಲಿನ ಗೋಡೆಗೆ ತಗುಲಿದೆ ಎನ್ನಲಾಗಿದೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App