English Tamil Hindi Telugu Kannada Malayalam Google news Android App
Sat. Jan 28th, 2023

Online Desk

ಉವಾಲ್ಡೆ (ಟೆಕ್ಸಾಸ್): ಅಮೆರಿಕಾದ ಟೆಕ್ಸಾಸ್‌ ನಗರದಲ್ಲಿದ್ದ ಪ್ರಾಥಮಿಕ ಶಾಲೆಯೊಂದಕ್ಕೆ ನುಗ್ಗಿರುವ ವ್ಯಕ್ತಿಯೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 18 ಮಕ್ಕಳೂ ಸೇರಿದಂತೆ 21 ಮಂದಿಯನ್ನು ಹತ್ಯೆ ಮಾಡಿದ್ದಾನೆ.

18ರ ಹರೆಯದ ಯುವಕ ಸಾಲ್ವಡೋರ್ ರಾಮೊಸ್​ ಆರೋಪಿ ಎಂದು ಗುರ್ತಿಸಲಾಗಿದೆ. ದಾಳಿ ನಡೆಸಿದ ಈತನನ್ನು ಪೊಲೀಸರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ಜಪಾನ್ ಸೇರಿದಂತೆ ಏಷ್ಯಾದ ದೇಶಗಳಿಗೆ ಐದು ದಿನಗಳ ಪ್ರವಾಸಕ್ಕೆ ತೆರಳಿರುವ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದು, ‘ಇಂತಹ ಪ್ರಕರಣಗಳು ವಿಶ್ವದ ಇತರ ದೇಶಗಳಲ್ಲಿ ಅಪರೂಪಕ್ಕೊಮ್ಮೆ ಆಗುತ್ತವೆ. ಆದರೆ, ಅಮೆರಿಕದಲ್ಲಿ ಪದೇಪದೇ ಆಗುತ್ತಿರುವುದು ವಿಷಾದದ ಸಂಗತಿ. ದೇವರಾಣೆ, ನಾವು ಗನ್ ಲಾಬಿಗೆ ಕಡಿವಾಣ ಹಾಕುತ್ತೇವೆ. ಮೃತರ ಗೌರವಾರ್ಥ ದೇಶವ್ಯಾಪಿ ಬಾವುಟಗಳನ್ನು ಅರ್ಧ ಮಟ್ಟಕ್ಕೆ ಹಾರಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟೆಕ್ಸಾಸ್: ಎಲ್ಲಾ ಒತ್ತೆಯಾಳುಗಳು ಸುರಕ್ಷಿತ, ದುಷ್ಕರ್ಮಿಯ ಹತ್ಯೆ

ಇತ್ತೀಚೆಗೆ, ನ್ಯೂಯಾರ್ಕ್​ನ ಬಫಲೊ ನಗರದ ಸೂಪರ್‌ ಮಾರ್ಕೆಟ್‌ನಲ್ಲಿ ಬಂದೂಕುಧಾರಿಯೊಬ್ಬ ಗುಂಡು ಹಾರಿಸಿದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದರು. ಎರಡು ವಾರಗಳ ನಂತರ ಮತ್ತೆ ಈ ಘಟನೆ ನಡೆದಿದೆ. ಆ ಘಟನೆಯನ್ನು ‘ಜನಾಂಗೀಯ ಪ್ರೇರಿತ’ ಸಾಮೂಹಿಕ ಗುಂಡಿನ ದಾಳಿ ಎಂದು ಹೇಳಲಾಗಿತ್ತು.

Source link

For more news update stay with actp news

Android App

Facebook

Twitter

Dailyhunt

Share Chat

Telegram

Koo App

Leave a Reply

Your email address will not be published. Required fields are marked *