Online Desk
ನವದೆಹಲಿ: ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಸಂಸತ್ತಿನಲ್ಲಿ ಮಂಗಳವಾರ ಗೃಹ ವ್ಯವಹಾರಗಳ ಸಚಿವಾಲಯ(MHA) ಮಂಡಿಸಿದ ದಾಖಲೆ ಬಹಿರಂಗಪಡಿಸಿದೆ.
2020ರಲ್ಲಿ ಲಿಂಗ, ಜನಾಂಗ, ಜನ್ಮಸ್ಥಳದ ಆಧಾರದ ಮೇಲೆ ಗುಂಪುಗಳ ನಡುವೆ ದ್ವೇಷ ಉತ್ತೇಜಿಸಿದ ಹಿನ್ನೆಲೆಯ ಅಪರಾಧ ಪ್ರಕರಣಗಳು ಅತಿಹೆಚ್ಚು ದಾಖಲಾಗಿವೆ. 2020ರಲ್ಲಿ ಉತ್ತರ ಪ್ರದೇಶದಲ್ಲಿ ಒಟ್ಟು 330 ಮಂದಿಯನ್ನು ಬಂಧಿಸಲಾಗಿದೆ.
ಇದನ್ನು ಓದಿ: ಉತ್ತರ ಪ್ರದೇಶ: ಮುಜಾಫರ್‌ನಗರದಲ್ಲಿ ದಲಿತ ಮಹಿಳೆಗೆ ಲೈಂಗಿಕ ಕಿರುಕುಳ, ವಿಡಿಯೊ ಮಾಡಿದ ಆರೋಪಿಗಳು
176 ಬಂಧನಗಳೊಂದಿಗೆ ತಮಿಳುನಾಡು ಎರಡನೇ ಸ್ಥಾನದಲ್ಲಿದ್ದರೆ, ಅಸ್ಸಾಂ ನಂತರದ ಸ್ಥಾನದಲ್ಲಿದೆ. ಒಡಿಶಾ ಮತ್ತು ಮಿಜೋರಾಂನಲ್ಲಿ ಶೂನ್ಯ ಪ್ರಕರಣಗಳು ದಾಖಲಾಗಿವೆ.
2018-2020 ರ ಡೇಟಾವನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(NCRB) ದಾಖಲಿಸಿದೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App