The New Indian Express
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಹಿಂದೂ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಮಂಗಳೂರು ಹೊರವಲಯ ಸುರತ್ಕಲ್ ನಲ್ಲಿ ಮೊಹಮ್ಮದ್ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ ಎನ್ ಶಶಿಕಾಂತ್ ತಿಳಿಸಿದ್ದಾರೆ. ಬಂಧಿತರನ್ನು ಸುಹಾಸ್ ಶೆಟ್ಟಿ, ಮೋಹನ್, ಗಿರಿಧರ್, ಅಭಿಷೇಕ್, ಶ್ರೀನಿವಾಸ್, ದೀಕ್ಷಿತ್ ಎಂದು ಗುರುತಿಸಲಾಗಿದೆ.
ಕೊಲೆಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ ಆದರೆ ಇದು ಪ್ರತೀಕಾರದ ಕೊಲೆ ಎಂದು ಸಾಕಷ್ಟು ಸುಳಿವುಗಳು ತಿಳಿಸುತ್ತವೆ ಎಂದಿದ್ದಾರೆ. ಜುಲೈ 26 ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಸುಹಾಸ್, ಮೋಹನ್ ಮತ್ತು ಅಭಿಷೇಕ್ ಅವರು ಡ್ರ್ಯಾಗನ್ ಮತ್ತು ತಲ್ವಾರ್ ಬಳಸಿ ಫಾಜಿಲ್ ನ್ನು ಹತ್ಯೆ ಮಾಡಿದ್ದಾರೆ. ಆರಂಭದಲ್ಲಿ ಆರೋಪಿಗಳು 6-7 ಜನರನ್ನು ಗುರಿಯಾಗಿರಿಸಿಕೊಂಡಿದ್ದರು. ಕೊನೆಗೆ ಫಾಜಿಲ್‌ನನ್ನು ಹತ್ಯೆ ಮಾಡಿದ್ದಾರೆ. ಆರೋಪಿಗಳಲ್ಲಿ ಒಬ್ಬ ಫಾಜಿಲ್‌ಗೆ ಪರಿಚಿತನಾಗಿದ್ದು, ಆತನ ಚಲನವಲನಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡಿದ್ದ. ಆರೋಪಿಗಳು ಕಾರ್ಕಳ ಸಮೀಪದ ಇನ್ನಾ ಗ್ರಾಮದಲ್ಲಿ ಅಪರಾಧ ಕೃತ್ಯಕ್ಕೆ ಬಳಸಿದ್ದ ಕಾರನ್ನು ಬಿಟ್ಟು ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ತಲೆಮರೆಸಿಕೊಂಡಿದ್ದರು.
#Mangaluru Six arrested in connection with #MohammedFazil murder case. Accused Suhas Shetty, Mohan, Giridhar, Abhishek, Srinivas, Deekshit decided on July 26 night to eliminate ‘someone’, after BJP worker #PraveenNettaru murder news broke out @XpressBengaluru @santwana99
— vincent dsouza (@vinndz_TNIE) August 2, 2022
ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯ ಸುದ್ದಿ ಹೊರಬಂದ ಕೂಡಲೇ ಜುಲೈ 26ರಂದು ಈ ಆರೋಪಿಗಳು ಯಾರಾದರೊಬ್ಬರನ್ನು ಮುಗಿಸಿಬಿಡಬೇಕೆಂದು ಸಂಚು ರೂಪಿಸಿದ್ದರು ಎಂದು ತನಿಖೆಯಿಂದ ಗೊತ್ತಾಗಿದೆ ಎಂದು ಆಯುಕ್ತರು ತಿಳಿಸಿದರು.
ಇದನ್ನೂ ಓದಿ: ಫಾಜಿಲ್ ಯಾವುದೇ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರಲಿಲ್ಲ; ಮಂಗಳೂರಿನಲ್ಲಿ 144 ಸೆಕ್ಷನ್ ಜಾರಿ: ಪೊಲೀಸ್ ಆಯುಕ್ತ
ಇನ್ನು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಚು ನಡೆಸಿದ ಮತ್ತು ಹತ್ಯೆ ಮಾಡಿದ ಹಂತಕ ಶಂಕಿತರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಗುರುತಿಸಿದ್ದು ಇಂದು ಮತ್ತೆ ಬೆಳ್ಳಾರೆ ಸಮೀಪದ ಪಳ್ಳಿಮಜಲು ನಿವಾಸಿಗಳಾದ ಸದ್ದಾಂ, 32 ವರ್ಷ, ಹಾರಿಸ್, 42 ವರ್ಷ ಎಂದು ಗುರುತಿಸಲಾಗಿದ್ದು ತಲೆಮರೆಸಿಕೊಂಡಿರುವ ಅವರ ಪತ್ತೆಗಾಗಿ ತೀವ್ರ ಶೋಧಕಾರ್ಯ ನಡೆಯುತ್ತಿದೆ ಎಂದು ಎಸ್ಪಿ ಋಷಿಕೇಶ್ ಸೋನವಾನೆ ತಿಳಿಸಿದ್ದಾರೆ.
ಇಬ್ಬರ ವಿರುದ್ಧವೂ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ UA(P) Act 1967 ಕಲಂ 16, 18 ಕಲಂ 302, 120B r/w 34 IPC ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳಾದ ಶಫೀಕ್ ಮತ್ತು ಜಾಕೀರ್ ಅವರನ್ನು ಈಗಾಗಲೇ ಜುಲೈ 28 ರಂದು ಬಂಧಿಸಲಾಗಿದೆ. ಈ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡ ನಂತರ ತನಿಖೆ ಮುಂದುವರೆಸಲಾಗಿದೆ. ಹೆಚ್ಚಿನ ಸಾಕ್ಷ್ಯಾಧಾರಗಳ ಮೇಲೆ ಸದ್ದಾಂ ಮತ್ತು ಹಾರಿಸ್ ನ್ನು ಗುರುತಿಸಲಾಗಿದೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App