PTI
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 17,135 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,40,67,144ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ 47 ಜನರು ಸಾವಿಗೀಡಾಗಿದ್ದು, ಈವರೆಗೆ 5,26,477 ಜನರು ಮೃತಪಟ್ಟಿದ್ದಾರೆ.
ಸದ್ಯ ದೇಶದಲ್ಲಿ 1,37,057 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕು ಪ್ರಕಣಗಳ ಪೈಕಿ ಶೇ 0.31ರಷ್ಟಿದೆ. ರಾಷ್ಟ್ರೀಯ ಚೇತರಿಕೆ ದರವು ಶೇ 98.49ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
COVID19 | India records 17,135 new cases in the last 24 hours; Active cases at 1,37,057
— ANI (@ANI) August 3, 2022
ದೈನಂದಿನ ಪಾಸಿಟಿವಿಟಿ ದರ ಶೇ 3.69ರಷ್ಟಿದ್ದರೆ, ಮರಣ ಪ್ರಮಾಣ ಶೇ 1.20ರಷ್ಟಿದೆ. ಸದ್ಯ ಈವರೆಗೆ ಒಟ್ಟು 4,34,03,610 ಜನರು ಗುಣಮುಖರಾಗಿದ್ದಾರೆ.
ಇದನ್ನೂ ಓದಿ: ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1,274 ಸೇರಿ ರಾಜ್ಯದಲ್ಲಿ 1,736 ಮಂದಿಗೆ ಪಾಸಿಟಿವ್; ಸಾವು ಶೂನ್ಯ
ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ ದೇಶದಲ್ಲಿ 204.84 ಕೋಟಿ ಕೋವಿಡ್ ಲಸಿಕೆ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯದ ಅಂಕಿಅಂಶಗಳಿಂದ ತಿಳಿದುಬಂದಿದೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App