Online Desk
ಬೆಂಗಳೂರು: ರದ್ದುಪಡಿಸಿರುವ ಪಿಎಸ್ ಐ ಪರೀಕ್ಷೆಯನ್ನು ಶೀಘ್ರದಲ್ಲಿಯೇ ಮತ್ತೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ತಮ್ಮ ನಿವಾಸದಲ್ಲಿ ಭೇಟಿಯಾದ ಪಿಎಸ್ ಐ ಹುದ್ದೆ ಅಪೇಕ್ಷಿತ ಅಭ್ಯರ್ಥಿ ಗಳಿಗೆ ಈ ಕುರಿತು ಭರವಸೆ ನೀಡಿದ್ದು ಮರುಪರೀಕ್ಷೆ ನಡೆಸಲು ಶೀಘ್ರದಲ್ಲಿಯೇ ಸರಕಾರ ನಿರ್ಧಾರ ಕೈಗೊಳ್ಳಲಿದೆ ಎಂದರು. ಪಿಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಪ್ರಕ್ರಿಯೆ ಮುಗಿದ ನಂತರ ಮರು ಪರೀಕ್ಷೆ ನಡೆಸುವ ಬಗ್ಗೆ ಪ್ರಕಟಣೆ ಹೊರಡಿಸಲಾಗುವುದು ಎಂದರು.
ಇದನ್ನೂ ಓದಿ: ಪಿಎಸ್ಐ ನೇಮಕಾತಿ ಅಕ್ರಮ: ಅಮೃತ್ ಪೌಲ್ ಗೆ 14 ದಿನ ನ್ಯಾಯಾಂಗ ಬಂಧನ
ರದ್ದಾದ ಪರೀಕ್ಷೆ ಬರೆದಿದ್ದ ಹಾಗೂ ಅಕ್ರಮದಲ್ಲಿ ಭಾಗಿಯಾಗದಿದ್ದ ಎಲ್ಲಾ 56,000 ಅಭ್ಯರ್ಥಿಗಳು ಮರುಪರೀಕ್ಷೆ ತೆಗೆದುಕೊಳ್ಳಲು ಅರ್ಹತೆ ಹೊಂದಿದ್ದು, ಯಾವುದೇ ಆತಂಕ ಬೇಡ ಎಂದು ಸಚಿವರು ಭರವಸೆ ನೀಡಿದರು. ಮರು ಪರೀಕ್ಷೆ ನಡೆಸುವುದು ತಡವಾದರೆ ವಯೋಮಿತಿ ಅರ್ಹತೆ ಕಳೆದುಕೊಳ್ಳುವ ಭಯ ಬೇಡ. ಪರೀಕ್ಷೆ ತಯಾರಿ ಮುಂದುವರೆಸಿ ಎಂದು ಸಚಿವರು ಕಿವಿಮಾತು ಹೇಳಿದರು.
For more news update stay with actp news
Android App
Facebook
Twitter
Dailyhunt
Share Chat
Telegram
Koo App