PTI
ನವದೆಹಲಿ: ಬೆಲೆ ಏರಿಕೆ, ಹಣದುಬ್ಬರ ಹಾಗೂ ನಿರುದ್ಯೋಗಗಳ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಂಸತ್ ಭವನದ ಎದುರು ಪ್ರತಿಭಟನೆ ನಡೆಸುತ್ತಿದ್ದ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಪ್ಪುಬಟ್ಟೆ ಧರಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಸಂಸತ್ ಭವನದ ಎದುರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಉತ್ತರಾಖಂಡ್ ಮಾಜಿ ಸಿಎಂ ಹರೀಶ್ ರಾವತ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ನಲ್ಲಿ ಕರೆದೊಯ್ದಿದ್ದಾರೆ.
#WATCH | Congress MP Rahul Gandhi detained by police during a protest against the Central government on price rise and unemployment in Delhi pic.twitter.com/TxvJ8BCli9
— ANI (@ANI) August 5, 2022
ಇದಕ್ಕೂ ಮುನ್ನ ಪ್ರತಿಭಟನಾ ನಿರತ ಸಂಸದರನ್ನು ವಿಜಯ್ ಚೌಕ್ ಬಳಿ ಪೊಲೀಸರು ತಡೆದಿದ್ದರು.
ನವದೆಹಲಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಪ್ರತಿಭಟನೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂಬ ಕಾರಣ ನೀಡಿದ್ದ ದೆಹಲಿ ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ನ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರು. ಪೊಲೀಸ್ ಅನುಮತಿ ನಿರಾಕರಣೆಯ ಹೊರತಾಗಿಯೂ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮುಂದುವರೆಸಿದ್ದರು.
For more news update stay with actp news
Android App
Facebook
Twitter
Dailyhunt
Share Chat
Telegram
Koo App