The New Indian Express
ನವದೆಹಲಿ: ಉಪರಾಷ್ಟ್ರಪತಿ ಆಯ್ಕೆಗೆ ಇಂದು ಆಗಸ್ಟ್ 6 ಶನಿವಾರದಂದು ಮತದಾನ ಬೆಳಗ್ಗೆ 10ರಿಂದ ಸಾಯಂಕಾಲ 5 ಗಂಟೆಯವರೆಗೆ ನಡೆಯಲಿದೆ. ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಮತ್ತು ವಿರೋಧ ಪಕ್ಷಗಳ ಸಹಮತದ ಅಭ್ಯರ್ಥಿಯಾಗಿ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ ಕಣದಲ್ಲಿದ್ದಾರೆ.
ನೂತನ ಉಪ ರಾಷ್ಟ್ರಪತಿಗಳ ಆಯ್ಕೆಗೆ ಸಂಸತ್ತಿನ ಉಭಯ ಸದನಗಳ ಸದಸ್ಯರು ಮತ ಹಾಕಲಿದ್ದಾರೆ. ಎನ್‌ಡಿಎ ಪರವಾಗಿ ಕಣಕ್ಕಿಳಿದಿರುವ ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಧನಕರ್ ಸುಲಭ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.
ಇನ್ನು ವಿರೋಧ ಪಕ್ಷಗಳಲ್ಲಿ ಒಗ್ಗಟ್ಟಿನ ಕೊರತೆ ಕಾಣುತ್ತಿದೆ. ಅಭ್ಯರ್ಥಿಯ ಆಯ್ಕೆ ವಿಚಾರಲ್ಲಿ ಸಹಮತಕ್ಕೆ ಬಂದಿಲ್ಲ ಎಂದು ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಆರೋಪಿಸಿದ್ದು ಮತದಾನದಿಂದ ದೂರ ಉಳಿಯಲು ನಿರ್ಧರಿಸಿದೆ.
80 ವರ್ಷದ ಮಾರ್ಗರೇಟ್ ಆಳ್ವ ಅವರು ಕಾಂಗ್ರೆಸ್ ಹಿರಿಯ ನಾಯಕಿಯಾಗಿದ್ದು, ರಾಜಸ್ಥಾನ ಮತ್ತು ಉತ್ತರಾಖಂಡದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರೆ, 71 ವರ್ಷದ ಧನ್ ಕರ್ ಅವರು ಸಮಾಜವಾದಿ ಹಿನ್ನೆಲೆ ಹೊಂದಿರುವ ರಾಜಸ್ಥಾನದ ಜಾಟ್ ಸಮುದಾಯದ ನಾಯಕರಾಗಿದ್ದಾರೆ.
ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ವಿರೋಧ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಿದ ಎರಡು ದಿನಗಳ ನಂತರ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಆಳ್ವಾ ಅವರಿಗೆ ನೀಡುತ್ತಿದೆ. ಐಎಂಐಎಂ ಕೂಡ ಆಳ್ವಾ ಅವರಿಗೆ ಬೆಂಬಲ ನೀಡಿದೆ.
ಸಂಯುಕ್ತ ಜನತಾ ದಳ, ವೈಎಸ್‌ಆರ್‌ಸಿಪಿ, ಬಿಎಸ್‌ಪಿ, ಎಐಎಡಿಎಂಕೆ ಮತ್ತು ಶಿವಸೇನೆಯಂತಹ ಕೆಲವು ಪ್ರಾದೇಶಿಕ ಪಕ್ಷಗಳ ಬೆಂಬಲದೊಂದಿಗೆ, ಎನ್‌ಡಿಎ ಅಭ್ಯರ್ಥಿ 515 ಕ್ಕೂ ಹೆಚ್ಚು ಮತಗಳನ್ನು ಪಡೆಯುವ ಸಾಧ್ಯತೆಯಿದೆ, ಇದು ಅವರ ಗೆಲುವಿಗೆ ಸುಲಭ ಹಾದಿಯಾಗಿದೆ. ಮಾರ್ಗರೇಟ್ ಆಳ್ವ ಅವರ ಉಮೇದುವಾರಿಕೆಗೆ ಪಕ್ಷಗಳು ಘೋಷಿಸಿದ ಬೆಂಬಲದಿಂದ 200ಕ್ಕೂ ಹೆಚ್ಚು ಮತಗಳನ್ನು ಪಡೆಯುವ ಸಾಧ್ಯತೆಯಿದೆ.
ಲೋಕಸಭೆಯಲ್ಲಿ 23 ಮತ್ತು ರಾಜ್ಯಸಭೆಯಲ್ಲಿ 16 ಸಂಸದರನ್ನು ಹೊಂದಿರುವ ತೃಣಮೂಲ ಕಾಂಗ್ರೆಸ್ ಉಪರಾಷ್ಟ್ರಪತಿ ಚುನಾವಣೆಯಿಂದ ದೂರ ಉಳಿಯಲು ನಿರ್ಧರಿಸಿದೆ.
ಸಂಸತ್ತು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕಾದರೆ, ಸ್ವತಂತ್ರವಾಗಿರುವ ಸಂಸದರು ಪರಸ್ಪರ ನಂಬಿಕೆಯನ್ನು ಪುನರ್ನಿರ್ಮಿಸಲು ಮತ್ತು ಸ್ಪಷ್ಟ ನೇರ ಸಂವಹನ ಕಂಡುಕೊಳ್ಳಬೇಕು. ಅಂತಿಮವಾಗಿ, ನಮ್ಮ ಸಂಸತ್ತಿನ ಸ್ವರೂಪವನ್ನು ನಿರ್ಧರಿಸುವುದು ಸಂಸದರು ಎಂದು ಇಂದು ಉಪ ರಾಷ್ಟ್ರಪತಿ ಚುನಾವಣೆಗೆ ಮುನ್ನ ಮಾರ್ಗರೇಟ್ ಆಳ್ವ ಹೇಳಿದ್ದಾರೆ.
ಎಲ್ಲ ಪಕ್ಷಗಳು ಒಗ್ಗೂಡಲು ಮತ್ತು ಪರಸ್ಪರ ನಂಬಿಕೆ ಮತ್ತು ವಿಶ್ವಾಸವನ್ನು ಮರುಸ್ಥಾಪಿಸಲು, ಸಂಸತ್ತಿನ ಘನತೆಯನ್ನು ಎತ್ತಿಹಿಡಿಯುವ ಸಮಯ ಬಂದಿದೆ ಎಂದು ಆಳ್ವ ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಇದು ಕೋಪಕ್ಕೆ, ಪ್ರತಿಷ್ಠೆಗೆ ಸಮಯವಲ್ಲ: ದೀದಿಗೆ ಮಾರ್ಗರೇಟ್ ಆಳ್ವಾ ಹಾಗೆ ಹೇಳಿದ್ದೇಕೆ?
ಆಳ್ವ ಅವರನ್ನು ಬೆಂಬಲಿಸುತ್ತಿರುವ ಎಲ್ಲ ವಿರೋಧ ಪಕ್ಷದ ಸಂಸದರಿಗೆ ಧನ್ಯವಾದ ಅರ್ಪಿಸಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ಗುರುವಾರ ರಾತ್ರಿ ಔತಣಕೂಟ ಏರ್ಪಡಿಸಿದ್ದರು.ಮತ್ತೊಂದೆಡೆ, ಧನಕರ್ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ಹಲವಾರು ಬಿಜೆಪಿ ಸಂಸದರನ್ನು ಭೇಟಿ ಮಾಡಿದರು. ಇವರಲ್ಲಿ ಸುಶೀಲ್ ಕುಮಾರ್ ಮೋದಿ, ಗೌತಮ್ ಗಂಭೀರ್, ರಾಜ್ಯವರ್ಧನ್ ರಾಥೋಡ್, ರಾಜೇಂದ್ರ ಅಗರವಾಲ್, ಪ್ರದೀಪ್ ಚೌಧರಿ ಮತ್ತು ಕಾರ್ತಿಕೇಯ ಶರ್ಮಾ ಸೇರಿದ್ದಾರೆ.
ಇಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ತಕ್ಷಣವೇ ಮತ ಎಣಿಕೆ ನಡೆಯಲಿದೆ. ಸಂಜೆ ವೇಳೆಗೆ ಚುನಾವಣಾಧಿಕಾರಿಗಳು ಮುಂದಿನ ಉಪ ರಾಷ್ಟ್ರಪತಿಗಳ ಹೆಸರನ್ನು ಪ್ರಕಟಿಸಲಿದ್ದಾರೆ.
ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ. ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಇದೇ ಆಗಸ್ಟ್ 10 ರಂದು ಕೊನೆಗೊಳ್ಳಲಿದೆ. ಉಪ ರಾಷ್ಟ್ರಪತಿಗಳು ರಾಜ್ಯಸಭೆಯ ಸಭಾಪತಿಗಳೂ ಆಗಿರುತ್ತಾರೆ.
ಮತ ಚಲಾಯಿಸಿದ ಹಾಲಿ-ಮಾಜಿ ಪ್ರಧಾನಿ, ಗಣ್ಯರು: ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಸೇರಿದಂತೆ ಕೇಂದ್ರ ಸಚಿವರು, ಸಂಸದರು, ವಿರೋಧ ಪಕ್ಷದ ಸದಸ್ಯರು ಒಬ್ಬೊಬ್ಬರಾಗಿ ಬಂದು ಉಪ ರಾಷ್ಟ್ರಪತಿಗಳ ಆಯ್ಕೆಗೆ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
#WATCH | Delhi: Prime Minister Narendra Modi casts his vote for the Vice Presidential election, at the Parliament pic.twitter.com/cJWlgGHea7
— ANI (@ANI) August 6, 2022
For more news update stay with actp news
Android App
Facebook
Twitter
Dailyhunt
Share Chat
Telegram
Koo App