The New Indian Express
ನವದೆಹಲಿ: ಕೇಂದ್ರ ಸರ್ಕಾರ ತನ್ನ ನೀತಿಗಳನ್ನು ಬಲವಂತವಾಗಿ ಹೇರದಂತೆ ಬಿಜೆಪಿಯೇತರ ಆಡಳಿತದ ರಾಜ್ಯಗಳ ಕೆಲವು ಮುಖ್ಯಮಂತ್ರಿಗಳು ಭಾನುವಾರ ಕೇಂದ್ರ ಸರ್ಕಾರಕ್ಕೆ ಹೇಳಿದ್ದಾರೆ. ಸಹಕಾರಿ ಒಕ್ಕೂಟವನ್ನು ಬಲಪಡಿಸಲು ಮತ್ತು ಜಿಎಸ್‌ಟಿ ಜಾರಿಯಿಂದಾಗುವ ಆದಾಯದ ಕೊರತೆಗಾಗಿ ರಾಜ್ಯಗಳಿಗೆ ಪಾವತಿಸುವ ಪರಿಹಾರವನ್ನು ಐದು ವರ್ಷಗಳ ವಿಸ್ತರಣೆಗೆ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ನೀತಿ ಆಯೋಗದ ಆಡಳಿತ ಮಂಡಳಿತ ಸಭೆಯಲ್ಲಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ, ರಾಷ್ಟ್ರೀಯ ವಿಪತ್ತು ನಿರ್ವಹಣೆಗೆ ರಾಜ್ಯಗಳಿಗೆ ಬೆಂಬಲ, ಬೆಳೆ ವಿಮೆ, ಕಿಸಾನ್ ಕ್ರೆಡಿಟ್ ಕಾರ್ಡ್, ನೀರಾವರಿ ಸೌಕರ್ಯ, ರಾಷ್ಟ್ರೀಯ ಶಿಕ್ಷಣ ನೀತಿ ಮತ್ತಿತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ರಾಜ್ಯ ಸರ್ಕಾರಗಳ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಕೋವಿಡ್ ಸಾಂಕ್ರಾಮಿಕದಿಂದ ಹೊರಬರಲು ಸಹಕಾರಿ ಸಂಯುಕ್ತ ವ್ಯವಸ್ಥೆ ಭಾರತಕ್ಕೆ ಸಹಾಯ ಮಾಡಿದೆ: ಪ್ರಧಾನಿ ಮೋದಿ
ಕೇಂದ್ರವು ಸಂವಿಧಾನದ ಒಕ್ಕೂಟ ವ್ಯವಸ್ಥೆ ವಿರುದ್ಧವಾಗಿ ಹೋಗಬಾರದು ಮತ್ತು ಅದರ ಸಹವರ್ತಿ ಪಟ್ಟಿಯಲ್ಲಿ ಪಟ್ಟಿ ಮಾಡಲಾದ ವಿಷಯಗಳ ಮೇಲಿನ ಶಾಸನ ಮಾಡುವಾಗ ರಾಜ್ಯಗಳೊಂದಿಗೆ ಸಮಾಲೋಚಿಸಬೇಕು ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಹೇಳಿದರು. ಛತ್ತೀಸ್ ಗಡದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ , ರಾಜ್ಯಗಳಿಗೆ ಪಾವತಿಸುವ ಜಿಎಸ್ ಟಿ ಪರಿಹಾರವನ್ನು ಐದು ವರ್ಷಗಳಿಗೆ ವಿಸ್ತರಿಸಬೇಕು ಎಂದರು.
ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಸಭೆಯನ್ನು ಬಹಿಷ್ಕರಿಸಿದರು. ಜಲ ಜೀವನ್ ಮಿಷನ್ ಅಡಿಯಲ್ಲಿ ನೀಡಲಾದ ರೂ. 3,922 ಕೋಟಿಯಲ್ಲಿ ಕೇವಲ ರೂ. 200ಕೋಟಿಯನ್ನು ಮಾತ್ರ ತೆಲಂಗಾಣ ಬಳಸಿಕೊಂಡಿದೆ ಎಂಬ ಕೇಂದ್ರ ಸರ್ಕಾರದ ಹೇಳಿಕೆಯನ್ನು ತೆಲಂಗಾಣ ಹಣಕಾಸು ಸಚಿವ ಹರೀಶ್ ರಾವ್ ಅಲ್ಲಗಳೆದಿದ್ದಾರೆ. ಕೇಂದ್ರದ ಎನ್ ಡಿಎ ಸರ್ಕಾರ ಕಳೆದ ಏಳು ವರ್ಷಗಳಲ್ಲಿ ಸೆಸ್ ರೂಪದಲ್ಲಿ 15,47,560 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ. ಅದರಲ್ಲಿ 8.60 ಲಕ್ಷ ಕೋಟಿ ರೂ.ಗಳನ್ನು ಎಲ್ಲ ರಾಜ್ಯಗಳಿಗೆ ವಿತರಿಸಬೇಕು ಎಂದು ಅವರು ಒತ್ತಾಯಿಸಿದರು.
For more news update stay with actp news
Android App
Facebook
Twitter
Dailyhunt
Share Chat
Telegram
Koo App