PTI
ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳ ಅವಧಿಯಲ್ಲಿ 19,406 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 4,41,26,994 ಕ್ಕೆ ಏರಿಕೆಯಾಗಿದೆ.
ಸದ್ಯ ದೇಶದಲ್ಲಿ 1,34,793 ಸಕ್ರಿಯ ಪ್ರಕರಣಗಳಿವೆ. ಇದೇ ಅವಧಿಯಲ್ಲಿ 49 ಜನರು ಸೋಂಕಿನಿಂದ ಸಾವಿಗೀಡಾಗಿದ್ದು, ಈವರೆಗೂ 5,26,649 ಜನರು ಮೃತಪಟ್ಟಿದ್ದಾರೆ. ಈ ಪೈಕಿ 11 ಜನರು ಕೇರಳದಲ್ಲೇ ಸಾವಿಗೀಡಾದವರು ಎಂದು ಶನಿವಾರ ಬೆಳಗ್ಗೆ 8 ಗಂಟೆಗೆ ಲಭ್ಯವಾದ ಮಾಹಿತಿಯಲ್ಲಿ ತಿಳಿದುಬಂದಿದೆ.
ಒಟ್ಟು ಸೋಂಕು ಪ್ರಕರಣಗಳಲ್ಲಿ ಶೇ 0.31 ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಚೇತರಿಕೆ ದರವು ಶೇ 98.50 ರಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ದೈನಂದಿನ ಪಾಸಿಟಿವಿಟಿ ದರ ಶೇ 4.96 ರಷ್ಟಿದ್ದು, ಮರಣ ಪ್ರಮಾಣ ಶೇ 1.19ರಷ್ಟಿದೆ. ದೇಶದಲ್ಲಿ ಈವರೆಗೆ 4,34,65,552 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಇದನ್ನೂ ಓದಿ: ಕೋವಿಡ್-19: ರಾಜ್ಯದಲ್ಲಿ ಇಂದು 2042 ಹೊಸ ಸೋಂಕು ಪ್ರಕರಣಗಳು ವರದಿ, 2 ಸಾವು!
ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಿಂದ ತಲಾ ಐವರು, ಛತ್ತೀಸ್‌ಗಢದಲ್ಲಿ ಮೂವರು, ದೆಹಲಿ, ಗುಜರಾತ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ ಮತ್ತು ತ್ರಿಪುರದಲ್ಲಿ ತಲಾ ಇಬ್ಬರು ಮತ್ತು ಹರಿಯಾಣ, ಕೇರಳ, ಮಧ್ಯಪ್ರದೇಶ, ಮೇಘಾಲಯ, ನಾಗಾಲ್ಯಾಂಡ್, ಒಡಿಶಾ, ಪಂಜಾಬ್, ಸಿಕ್ಕಿಂ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ತಲಾ ಒಬ್ಬರು ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ.
ಈವರೆಗೆ ಒಟ್ಟು 5,26,649 ಜನರು ಸಾವಿಗೀಡಾಗಿದ್ದು, ಈ ಪೈರಿ ಮಹಾರಾಷ್ಟ್ರದವ್ವಿ 1,48,129, ಕೇರಳದಲ್ಲಿ 70,548, ಕರ್ನಾಟಕದಲ್ಲಿ 40,155, ತಮಿಳುನಾಡಿನಲ್ಲಿ 38,033, ದೆಹಲಿಯಲ್ಲಿ 26,327, ಉತ್ತರ ಪ್ರದೇಶದಲ್ಲಿ 23,574 ಮತ್ತು ಪಶ್ಚಿಮ ಬಂಗಾಳದಿಂದ 21,389 ಜನರು ಮೃತಪಟ್ಟಿದ್ದಾರೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App