Online Desk
ವಿಜಯಪುರ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಎರಡನೇ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಧಾರವಾಡದ ಅಭಿನವ್ ಬಳ್ಳಾರಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಇದನ್ನು ಓದಿ : ಕಾಮನ್ ವೆಲ್ತ್ ಗೇಮ್ಸ್ 2022: ಭಾರತದ ಕುಸ್ತಿಪಟುಗಳಾದ ನವೀನ್, ವಿನೇಶ್ ಫೋಗಟ್ ಗೆ ಚಿನ್ನ, ಪೂಜಾಗೆ ಕಂಚಿನ ಪದಕ
ಟ್ರೆಡಿಷನಲ್ ಶೋಟೋಕನ್ ಕರಾಟೆ ಅಕಾಡೆಮಿ ಆಗಸ್ಟ್ 6 ಮತ್ತು 7 ರಂದು ಎರಡನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ ಆಯೋಜಿಸಿದ್ದು, ಅಭಿನವ್ ಬಳ್ಳಾರಿ ಶನಿವಾರ ನಡೆದ ಟ್ರೆಡಿಷನಲ್ ಕರಾಟೆ ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ.
ಇದನ್ನು ಓದಿ: ಕರಾಟೆ ಸೇರಿ ನಾಲ್ಕು ಕ್ರೀಡೆಗಳು ಟೋಕಿಯೊ ಒಲಿಂಪಿಕ್ಸ್‌ಗೆ ಹೊಸದಾಗಿ ಸೇರ್ಪಡೆ
ಅಭಿನವ್ ಬಳ್ಳಾರಿ ಧಾರವಾಡದ ಜೆಎಸ್ಎಸ್ ಶಾಲೆಯ ನಾಲ್ಕನೆ ತರಗತಿ ವಿದ್ಯಾರ್ಥಿಯಾಗಿದ್ದು, 9 ವರ್ಷದ ವೈಟ್ ಬೆಲ್ಟ್ ವಿಭಾಗದಲ್ಲಿ ಎರಡನೇ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಅಭಿನವ್ ಬಳ್ಳಾರಿ ತಂದೆ ಚಂದ್ರಶೇಖರ್ ಬಳ್ಳಾರಿ ವೃತ್ತಿಯಲ್ಲಿ ಪೊಲೀಸ್ ಪೇದೆಯಾಗಿದ್ದು, ಹಲವು ವರ್ಷಗಳಿಂದ ಧಾರವಾಡದಲ್ಲಿ ನೆಲೆಸಿದ್ದಾರೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App