The New Indian Express
ಬೆಂಗಳೂರು: ವಿಮಾ ಕಂಪನಿಯ ಉದ್ಯೋಗಿಯಾಗಿದ್ದ 32 ವರ್ಷದ ಮಹಿಳೆಯೊಬ್ಬರು ಶುಕ್ರವಾರ ಮಧ್ಯಾಹ್ನ ನಗರದ ಹೊರವಲಯದ ಎಂಎನ್ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತಮ್ಮ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ಖಿನ್ನತೆಗೆ ಒಳಗಾಗಿದ್ದ ಮಹಿಳೆ ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ: ಕಳೆದ 3 ದಿನಗಳಲ್ಲಿ ಬಿಬಿಎಂಪಿಗೆ 50,000 ದೋಷಯುಕ್ತ ಧ್ವಜ ಹಿಂದಿರುಗಿಸಿದ ಜನ
ಮೃತರನ್ನು ದಾಸನಾಪುರದ ಎಪಿಎಂಸಿ ಮಾರುಕಟ್ಟೆ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿರುವ ಶ್ವೇತಾ ಎಂದು ಪೊಲೀಸರು ಗುರುತಿಸಿದ್ದಾರೆ. ಮನೆಯಿಂದಲೇ ಕೆಲಸ ಮಾಡುತ್ತಿದ್ದ ಈ ಮಹಿಳೆ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಪತಿ ಸೈಯದ್ ಇಬ್ರಾಹಿಂ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ”ಶುಕ್ರವಾರ ಮಧ್ಯಾಹ್ನ 1ರಿಂದ 3.30ರ ನಡುವೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆಯ ವೇಳೆ ಆಕೆ ಫ್ಲಾಟ್‌ನಲ್ಲಿ ಒಬ್ಬಳೇ ಇದ್ದಳು. ಮತ್ತೊಂದು ಕೀ ಹೊಂದಿದ್ದ ಇಬ್ರಾಹಿಂ ಮನೆಗೆ ಹೋಗಿ ನೋಡಿದಾಗ ಪತ್ನಿ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ತಕ್ಷಣವೇ ಆಕೆಯನ್ನು ಕೆಳಗಿಳಿಸಿ ಸಮೀಪದ ಆಸ್ಪತ್ರೆಗೆ ಸಾಗಿಸಿದರು. ಆದರೆ ಮಹಿಳೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು ಎಂದು ಮೃತ ಮಹಿಳೆಯ ಸಹೋದರಿ ಮೇಘಾ ಹೇಳಿಕೆಯನ್ನು ಆಧರಿಸಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಈ ಸಂಬಂಧ ಎಂ.ಎನ್.ಹಳ್ಳಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App