PTI
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಸೋಮವಾರ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರನ್ನು ಭೇಟಿಯಾಗಿರುವುದು ಅವರ ಅಭಿಯಾನಿಗಳಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆದರೆ. ರಾಜಕೀಯ ಪ್ರವೇಶಿಸುವ ಯಾವುದೇ ಯೋಜನೆ ಇಲ್ಲ ಎಂದಿದ್ದಾರೆ.
ರಾಷ್ಟ್ರ ರಾಜಧಾನಿಯಿಂದ ಮರಳಿದ ನಂತರ ರಾಜಭವನದಲ್ಲಿ ರಾಜ್ಯಪಾಲ ರವಿ ಅವರನ್ನು ಭೇಟಿಯಾದ ರಜನಿಕಾಂತ್, ಇದೊಂದು ಸೌಜನ್ಯದ ಭೇಟಿಯಾಗಿತ್ತು. ತಮಿಳುನಾಡಿಗಾಗಿ ರಾಜ್ಯಪಾಲರು ಏನು ಬೇಕಾದರೂ ಮಾಡಲು ಸಿದ್ಧರಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಪೋಯಸ್ ಗಾರ್ಡನ್ ನಿವಾಸದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇದು ಸೌಜನ್ಯದ ಭೇಟಿ. ನಾನು ಸುಮಾರು 25-30 ನಿಮಿಷಗಳ ಕಾಲ ರಾಜ್ಯಪಾಲರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದರು.
ರಾಜ್ಯಪಾಲರು ತಮ್ಮ ಹೆಚ್ಚಿನ ಸಮಯವನ್ನು ಉತ್ತರ ಭಾರತದಲ್ಲಿ ಕಳೆದಿದ್ದಾರೆ ಆದರೆ, ತಮಿಳುನಾಡು ಮತ್ತು ಇಲ್ಲಿನ ಜನರನ್ನು ಪ್ರೀತಿಸುತ್ತಾರೆ . ತಮಿಳರ ಶ್ರಮ ಮತ್ತು ಪ್ರಾಮಾಣಿಕತೆಯನ್ನು ಇಷ್ಟಪಡುತ್ತಾರೆ. ಮುಖ್ಯವಾಗಿ, ಅವರು ಇಲ್ಲಿನ ಆಧ್ಯಾತ್ಮಿಕ ಪ್ರಜ್ಞೆಯಿಂದ ಪ್ರಭಾವಿತರಾಗಿದ್ದಾರೆ. ತಮಿಳುನಾಡಿನ ಕಲ್ಯಾಣಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧನಿದ್ದೇನೆ ಎಂದು ಅವರು ಹೇಳಿದ್ದಾರೆ ಎಂದರು.
ಭವಿಷ್ಯದಲ್ಲಿ ರಾಜಕೀಯಕ್ಕೆ ಧುಮುಕುತ್ತೀರಾ ಎಂಬ ಪ್ರಶ್ನೆಗೆ ನಕಾರಾತ್ಮಕವಾಗಿ ಉತ್ತರಿಸಿದರು ಮತ್ತು ಹಾಲು ಮತ್ತು ಮೊಸರಿನಂತಹ ಅಗತ್ಯ ವಸ್ತುಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಅವರ ಮುಂಬರುವ ಚಿತ್ರ ಜೈಲರ್ ಚಿತ್ರೀಕರಣವು ಆಗಸ್ಟ್ 15 ಅಥವಾ 22 ರಂದು ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು.
For more news update stay with actp news
Android App
Facebook
Twitter
Dailyhunt
Share Chat
Telegram
Koo App