Online Desk
ಬೆಂಗಳೂರು: ಪ್ರಕೃತಿ ವಿಕೋಪದ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಅಗತ್ಯಕ್ಕೆ ಅನುಗುಣವಾಗಿ ಕಾಲ ಕಾಲಕ್ಕೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸರ್ಕಾರದಿಂದ ಬೀದರ್ ಜಿಲ್ಲೆಗೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂಬ ಕಾಂಗ್ರೆಸ್ ಮುಖಂಡರಾದ ಈಶ್ವರ್ ಖಂಡ್ರೆ ಮತ್ತು ಎಂಬಿ ಪಾಟೀಲ್ ಅವರ ಆರೋಪಕ್ಕೆ ಟ್ವೀಟರ್ ನಲ್ಲಿ ಉತ್ತರಿಸಿರುವ ಮುಖ್ಯಮಂತ್ರಿ, ಪ್ರಕೃತಿ ವಿಕೋಪದ ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನ ಆಧರಿಸಿ ಹಣ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇದೇ ಆಗಸ್ಟ್ 2ರ ಮಾಹಿತಿಯಂತೆ ಬೀದರ್ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 20. 45 ಕೋಟಿ, ಕಲಬುರಗಿ ಜಿಲ್ಲಾಧಿಕಾರಿ ಖಾತೆಯಲ್ಲಿ 42. 07 ಕೋಟಿ, ಯಾದಗಿರಿ ಜಿಲ್ಲಾಧಿಕಾರಿಗಳ ಬಳಿ 25.14 ಕೋಟಿ, ವಿಜಯಪುರ ಜಿಲ್ಲಾಧಿಕಾರಿ ಖಾತೆಯಲ್ಲಿ 28.5 ಕೋಟಿ ಅನುದಾನ ಲಭ್ಯವಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.
ಯಾದಗಿರಿ ಜಿಲ್ಲಾಧಿಕಾರಿಗಳ ಬಳಿ 25.14 ಕೋಟಿ ರೂ. ಅನುದಾನ ಲಭ್ಯವಿದೆ.
ಪ್ರಕೃತಿ ವಿಕೋಪದ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಅಗತ್ಯಕ್ಕೆ ಅನುಗುಣವಾಗಿ ಕಾಲ ಕಾಲಕ್ಕೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ.
2/2— CM of Karnataka (@CMofKarnataka) August 8, 2022
For more news update stay with actp news
Android App
Facebook
Twitter
Dailyhunt
Share Chat
Telegram
Koo App