ANI
ಬಿರ್ ಭೂಮ್: ಪಶ್ಚಿಮ ಬಂಗಾಳದ ಬಿರ್ ಭೂಮ್ ಜಿಲ್ಲೆಯಲ್ಲಿ ಇಂದು ರಾಜ್ಯ ಸಾರಿಗೆ ಸಂಸ್ಥೆ ಬಸ್ ಮತ್ತು ಆಟೋ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 8 ಮಹಿಳೆಯರು ಸೇರಿದಂತೆ 9 ಮಂದಿ ದುರ್ಮರಣ ಹೊಂದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ರಾಮ್ ಪುರಹತ್ ನ ಮಲ್ಲರ್ ಪುರ ಬಳಿ ಈ ಅಪಘಾತ ಸಂಭವಿಸಿದೆ.
ಜನರಿಂದ ತುಂಬಿದ್ದ ಆಟೋ ಎದುರಿಗೆ ಬರುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆ ಬಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋದಲ್ಲಿದ್ದ 8 ಮಹಿಳಾ ಕೃಷಿ ಕಾರ್ಮಿಕರು ಹಾಗೂ ಆಟೋ ಚಾಲಕ ಮೃತಪಟ್ಟಿರುವುದಾಗಿ ಬಿರ್ ಭೂಮ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಂದ್ರ ನಾಥ್ ತ್ರಿಪಾಠಿ ಹೇಳಿದ್ದಾರೆ. ಮಹಿಳೆಯರು ಭತ್ತದ ಗದ್ದೆಯಿಂದ ಮನೆಗೆ ಹಿಂತಿರುಗುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.
West Bengal | 9 people killed in auto and bus collision in Mallarpur police station area of Birbhum district: Dhiman Mitra, SDPO Rampurhat pic.twitter.com/dqPmhhZves
— ANI (@ANI) August 9, 2022
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಅಪಘಾತದ ಬಗ್ಗೆ ದು:ಖ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಸಂಬಂಧಿಕರಿಗೆ 2 ಲಕ್ಷ ಹಾಗೂ ಗಾಯಾಗಳುಗಳಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
PM Narendra Modi expresses anguish on a tragic accident in Birbhum, WB. He also announced Rs 2 lakh for the next of kin of each deceased & Rs 50,000 for the injured pic.twitter.com/JGkG1rW6W4
— ANI (@ANI) August 9, 2022
For more news update stay with actp news
Android App
Facebook
Twitter
Dailyhunt
Share Chat
Telegram
Koo App