Online Desk
ಬುದ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಉಗ್ರರನ್ನು ಹೊಡೆದುರುಳಿಸಲಾಗದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
#UPDATE | Budgam encounter: All the three hiding LeT terrorists neutralised. Bodies being retrieved from the site, but identification is yet to be done. Incriminating materials, arms & ammunition recovered: ADGP Kashmir https://t.co/Nj0Mb4M64X
— ANI (@ANI) August 10, 2022
ಜಿಲ್ಲೆಯ ಖಾನ್‌ಸಾಹಿಬ್ ಪ್ರದೇಶದ ವಾಟರ್‌ಹೇಲ್‌ನಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು ಎಂದು ಪೊಲೀಸ್ ವಕ್ತಾರರು ವಿವರಿಸಿದ್ದಾರೆ.
ಅಡಗಿಕೊಂಡಿದ್ದ ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ್ದು, ಇದಕ್ಕೆ ಪ್ರತಿಯಾಗಿ ಯೋಧರು ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ಇಬ್ಬರು ಬಲಿಯಾಗಿದ್ದಾರೆ.
ಎನ್‌ಕೌಂಟರ್ ವೇಳೆ ಮೇ ತಿಂಗಳಲ್ಲಿ ಕಾಶ್ಮೀರಿ ಪಂಡಿತ್ ಸರ್ಕಾರಿ ನೌಕರ ರಾಹುಲ್ ಭಟ್ ಹತ್ಯೆಯಲ್ಲಿ ಭಾಗಿಯಾಗಿದ್ದ ಮೋಸ್ಟ್ ವಾಂಟೆಡ್ ಲತೀಫ್ ರಾಥರ್ ಸೇರಿದಂತೆ ಮೂವರು ಲಷ್ಕರ್ ವ್ಯಕ್ತಿಗಳು ಸಿಕ್ಕಿಬಿದ್ದಿದ್ದರು ಎಂದು ಕಾಶ್ಮೀರ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ವಿಜಯ್ ಕುಮಾರ್ ಹೇಳಿದ್ದಾರೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App