English Tamil Hindi Telugu Kannada Malayalam Google news Android App
Thu. Mar 23rd, 2023

Express News Service

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರಿನ ವಿವಾದಿತ ಈದ್ಗಾ ಮೈದಾನದ ವಿಚಾರದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗದ ಪೊಲೀಸರು ಮಂಗಳವಾರ ಹಲವು ಹಿಂದೂ ಸಂಘಟನೆಗಳ ಮುಖಂಡರೊಂದಿಗೆ ಶಾಂತಿ ಸಭೆ ನಡೆಸಿದರು.

ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಅವಕಾಶ ಇಲ್ಲ ಎಂದು ಶಾಸಕ  ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದ ಬೆನ್ನಲ್ಲೇ ಹಿಂದೂ ಸಂಘಟನೆಗಳೊಂದಿಗೆ ಪೊಲೀಸರು ಶಾಂತಿ ಸಭೆ ನಡೆಸಿದ್ದಾರೆ.

ಮಂಗಳವಾರ ನಡೆಯಲಿರುವ ಸಭೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ಆಹ್ವಾನಿಸಲಾಗಿದ್ದು, ಗುರುವಾರ ಮುಸ್ಲಿಂ ಸಮುದಾಯದ ಮುಖಂಡರನ್ನು ಕರೆಸಲಾಗುವುದು ಎಂದು ಡಿಸಿಪಿ (ಪಶ್ಚಿಮ) ಲಕ್ಷ್ಮಣ್ ನಿಂಬರಗಿ ಟಿಎನ್‌ಐಇಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಅವಕಾಶ ಇಲ್ಲ: ಜಮೀರ್ ಅಹ್ಮದ್ ಖಾನ್

‘ಮಂಗಳವಾರ ಹಿಂದೂ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿದ್ದು, ಗುರುವಾರ ಮುಸ್ಲಿಂ ಸಮುದಾಯದ ಮುಖಂಡರನ್ನು ಸಭೆಗೆ ಕರೆಸಲಾಗುವುದು. ಆಗಸ್ಟ್ 15 ರಂದು ಶಾಂತಿ ಕದಡದಂತೆ ಎರಡೂ ಸಮುದಾಯಗಳ ಸದಸ್ಯರನ್ನು ಕೇಳಲಾಗುತ್ತದೆ. ಈ ನೆಲದ ಕಾನೂನನ್ನು ಗೌರವಿಸುವಂತೆಯೂ ನಾಯಕರಿಗೆ ಹೇಳಲಾಗುವುದು’ ಎಂದು ಪಶ್ಚಿಮ ವಲಯದ ಡಿಸಿಪಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ.

ಮಂಗಳವಾರ ಸಂಜೆ ಚಾಮರಾಜಪೇಟೆಯ ಪೊಲೀಸ್ ಠಾಣೆಯಲ್ಲಿ ಪ್ರಭಾರ ಎಸಿಪಿ ಹಾಗೂ ಚಾಮರಾಜಪೇಟೆ ಪೊಲೀಸ್ ನಿರೀಕ್ಷಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ವಿಶ್ವ ಸನಾತನ ಪರಿಷತ್ತಿನ ಮುಖ್ಯಸ್ಥ ಎಸ್.ಭಾಸ್ಕರನ್, ಶ್ರೀರಾಮ ಸೇನೆ ಸದಸ್ಯರು ಹಾಗೂ ಚಾಮರಾಜಪೇಟೆ ನಾಗರಿಕರ ಒಕ್ಕೂಟದ ಪ್ರತಿನಿಧಿಗಳು ಭಾಗವಹಿಸಿದ್ದರು.

ಇತ್ತೀಚೆಗೆ, ಬಿಬಿಎಂಪಿಯ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಎಸ್‌.ಎನ್. ಶ್ರೀನಿವಾಸ ಅವರು, ಈ ಜಮೀನು ಕಂದಾಯ ಇಲಾಖೆಗೆ ಸೇರಿದ್ದಾಗಿದ್ದು, 2.5 ಎಕರೆ ಭೂಮಿಗೆ ಖಾತೆಗಾಗಿ ಅರ್ಜಿ ಸಲ್ಲಿಸುವಂತೆ ವಕ್ಫ್ ಮಂಡಳಿಗೆ ಕೇಳಿದ್ದ ಈ ಹಿಂದಿನ ಆದೇಶವನ್ನು ರದ್ದುಗೊಳಿಸಿದ್ದರು. 1955ರಿಂದ ಮುನ್ಸಿಫ್ ನ್ಯಾಯಾಲಯವು ಬಿಬಿಎಂಪಿಯನ್ನು ಈದ್ಗಾ ಮೈದಾನಕ್ಕೆ ಪ್ರವೇಶಿಸದಂತೆ ತಡೆಯಿತು. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಎರಡೂ ವಕ್ಫ್ ಮಂಡಳಿಯ ಪರವಾಗಿಯೇ ತೀರ್ಪು ನೀಡಿವೆ ಎಂದು ಅವರು ವಾದಿಸಿದ್ದರು. ನಂತರ ಈ ಜಮೀನನ್ನು ವಕ್ಫ್ ಬೋರ್ಡ್ ಆಸ್ತಿ ಎಂದು ಗುರುತಿಸಿ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ವಕ್ಫ್ ಮಂಡಳಿಯು ನಿಗದಿತ ಸಮಯದೊಳಗೆ ಖಾತಾ ಅರ್ಜಿ ಸಲ್ಲಿಸಲು ವಿಫಲವಾಗಿತ್ತು. ನಂತರ, ಹಿಂದೂ ಸಂಘಟನೆಗಳು ಇತರ ಧಾರ್ಮಿಕ ಹಬ್ಬಗಳನ್ನು ಮೈದಾನದಲ್ಲಿ ನಡೆಸಲು ಅನುಮತಿ ನೀಡಬೇಕೆಂದು ಪಟ್ಟು ಹಿಡಿದಿದ್ದವು.

ದ್ವೇಷ ಭಾಷಣಕ್ಕಾಗಿ ಹಿಂದೂ ಸಂಘಟನೆಯ ಮುಖ್ಯಸ್ಥನ ವಿರುದ್ಧ ಎಫ್‌ಐಆರ್

ಬೆಂಗಳೂರು: ಧರ್ಮದ ಆಧಾರದಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷ ಹುಟ್ಟುಹಾಕಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಚಾಮರಾಜಪೇಟೆ ಪೊಲೀಸರು ವಿಶ್ವ ಸನಾತನ ಪರಿಷತ್ ಅಧ್ಯಕ್ಷ ಭಾಸ್ಕರನ್ ಎಸ್. ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಆಸ್ತಿ: ಬಿಬಿಎಂಪಿ ಘೋಷಣೆ

ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದಕ್ಕೆ ಸಂಬಂಧಿಸಿದಂತೆ ಎಸ್. ಭಾಸ್ಕರನ್ ಸೋಮವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ವಕ್ಫ್ ಬೋರ್ಡ್ ಜಾಗ ಖಾಲಿ ಮಾಡಬೇಕು, ಇಲ್ಲವಾದಲ್ಲಿ ಬಾಬರಿ ಮಸೀದಿ ಕೆಡವಿದ ದಿನವೇ ಡಿ. 6ರಂದು ಸಾವಿರಾರು ಹಿಂದೂ ಸಂಘಟನೆಗಳ ಸದಸ್ಯರು ಈದ್ಗಾ ಗೋಪುರವನ್ನು ಕೆಡವುವುದಾಗಿ ತಿಳಿಸಿದ್ದರು.

ಭಾಸ್ಕರನ್ ಅವರು ನೀಡಿರುವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಐಪಿಸಿ ಸೆಕ್ಷನ್ 153A ಮತ್ತು 295A ಅಡಿಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಿಸಿದ್ದರು.

Source link

For more news update stay with actp news

Android App

Facebook

Twitter

Dailyhunt

Share Chat

Telegram

Koo App

Leave a Reply

Your email address will not be published. Required fields are marked *