Online Desk
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1691 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,26,085ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಆರು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40134ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನು ಓದಿ: ರಾಜ್ಯದಲ್ಲಿ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಪಡೆದವರ ಸಂಖ್ಯೆ ಶೇ. 17 ಮಾತ್ರ: ಸಚಿವ ಸುಧಾಕರ್
ಬೆಂಗಳೂರಿನಲ್ಲಿ ಇಂದು 1225 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1848847ಕ್ಕೆ ಏರಿಕೆಯಾಗಿದೆ. ಆದರೆ ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 1982 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3975855ಕ್ಕೆ ಏರಿಕೆಯಾಗಿದೆ. ಇನ್ನು 10054 ಸಕ್ರಿಯ ಪ್ರಕರಣಗಳಿವೆ.
ಇಂದಿನ 11/08/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/SQ01vL4rqu @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/QrUv2fSHL2
— K’taka Health Dept (@DHFWKA) August 11, 2022
For more news update stay with actp news
Android App
Facebook
Twitter
Dailyhunt
Share Chat
Telegram
Koo App