Online Desk
ಬೆಂಗಳೂರು: ಭಾರತದ ಸ್ವಾತಂತ್ರ್ಯದ 75ನೇ ವರ್ಷದ ಸ್ಮರಣಾರ್ಥ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಆಗಸ್ಟ್ 15 ರಂದು ನಗರದ ಎಲ್ಲಾ ಬಸ್‌ಗಳಲ್ಲಿ ಉಚಿತ ಪ್ರಯಾಣವನ್ನು ಘೋಷಿಸಿದೆ.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸರ್ಕಾರ ಒಪ್ಪಿಗೆ ಕೊಟ್ಟ ಹಿನ್ನೆಲೆಯಲ್ಲಿ ಉಚಿತ ಪ್ರಯಾಣದ ಘೋಷಣೆ ಮಾಡಿದ್ದು, ಇದರಿಂದ ಬಿಎಂಟಿಸಿಗೆ 3 ಕೋಟಿ ಲಾಸ್ ಆಗಲಿದೆ. ವೊಲ್ವೋ ಸೇರಿ ಎಲ್ಲಾ ಬಸ್‌ಗಳಲ್ಲಿ ನಗರದಾದ್ಯಂತ ಉಚಿತ ಪ್ರಯಾಣವನ್ನು ಘೋಷಿಸಿದೆ.
ಇನ್ನೊಂಡೆದೆ ಈಗಾಗಲೇ ಬೆಂಗಳೂರಿನಲ್ಲಿ 90 ಎಲೆಕ್ಟ್ರಿಕ್ ಬಸ್‌ಗಳು ಸಂಚಾರ ನಡೆಸುತ್ತಿದ್ದು, ಇದರ ಜೊತೆಗೆ ಆಗಸ್ಟ್ 14ರಂದು ಮತ್ತೆ 75 ಎಲೆಕ್ಟ್ರಿಕ್ ಬಸ್‌ಗಳನ್ನು ಸಂಚಾರಕ್ಕೆ ಬಿಡಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App