The New Indian Express
ಮುಂಬೈ: ಇತ್ತೀಚಿಗೆ ಬೆತ್ತಲೆ ಫೋಟೋ ಶೂಟ್ ಮಾಡಿಸಿ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ. ಎಫ್ ಐಆರ್ ದಾಖಲಾದ ನಂತರ ಸಮನ್ಸ್ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.
ರಣವೀರ್ ಮುಂಬೈಯಿಂದ ಹೊರಗಿದ್ದು, ಆಗಸ್ಟ್ 16 ರಂದು ನಗರಕ್ಕೆ ವಾಪಸ್ಸಾಗಲಿದ್ದಾರೆ. ಆತ ತನಿಖಾ ಅಧಿಕಾರಿಗಳ ಮುಂದೆ ವಿಚಾರಣೆ ಹಾಜರಾಗುವುದಾಗಿ ನಟ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಹೊಸ ಮಾಹಿತಿ ಪ್ರಕಾರ ಆಗಸ್ಟ್ 16 ಅಥವಾ ನಂತರ ರಣವೀರ್ ಗೆ ಸಮನ್ಸ್ ನೀಡಲಾಗುತ್ತದೆ.
ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ನಗ್ನ ಫೋಟೊ ಹಂಚಿಕೊಂಡಿದ್ದ ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್
ಸಾಮಾಜಿಕ ಮಾಧ್ಯಮಗಳಲ್ಲಿ ಬೆತ್ತಲೆ ಚಿತ್ರಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಜುಲೈ 26 ರಂದು ರಣವೀರ್ ಸಿಂಗ್ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು. ನಟನ ವಿರುದ್ಧ ಮುಂಬೈ ಮೂಲದ ಸ್ವಯಂ ಸೇವಾ ಸಂಸ್ಥೆಯೊಂದು ಚೆಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.
ಇದರ ಆಧಾರದ ಮೇಲೆ ಐಪಿಸಿ ಸೆಕ್ಷನ್ 292, 293, 509 (ಮಹಿಳೆಯರನ್ನು ಅಪಮಾನಿಸಲು ಉದ್ದೇಶದ ಪದ, ಮುಖಭಾವ ಅಥವ ವರ್ತನೆ ಉದ್ದೇಶ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ವಿನಾಯಿತಿಯಡಿ ಸಿಂಗ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು. ಮ್ಯಾಗಜಿನ್ ಗಾಗಿ ಶೂಟ್ ಮಾಡಿಸಲಾದ ಬೆತ್ತಲೆ ಚಿತ್ರವನ್ನು ತನ್ನ ಇನ್ಸ್ಟಾಗ್ರಾಮ್ ನಲ್ಲಿ ಕಳೆದ ಗುರುವಾರ ರಣವೀರ್ ಸಿಂಗ್ ಫೋಸ್ಟ್ ಮಾಡಿದ ನಂತರ ವೈರಲ್ ಆಗಿದೆ ಎಂದು ಪೊಲೀಸರು ಹೇಳಿದ್ದಾರೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App